Sunday, January 19, 2025

ಕೊಡಗು

ಉಡುಪಿಕೊಡಗುದಕ್ಷಿಣ ಕನ್ನಡಮಡಿಕೇರಿಸುದ್ದಿ

ನಾಳೆ ಕೊಡಗು , ದಕ್ಷಿಣ ಕನ್ನಡ ಸೇರಿದಂತೆ ಮಳೆ ಪೀಡಿತ ನಾಲ್ಕು ಜಿಲ್ಲೆಗಳಿಗೆ ನಾಳೆ ಸಿಎಂ ಬೊಮ್ಮಾಯಿ ಭೇಟಿ – ಕಹಳೆ ನ್ಯೂಸ್

ಬೆಂಗಳೂರು (ಜು. 11): ರಾಜ್ಯದಲ್ಲಿ ಕಳೆದ 10 ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಮಳೆಯಿಂದ ಸಾಕಷ್ಟು ಜಿಲ್ಲೆಗಳಲ್ಲಿ ಭೂಕುಸಿತ ಮನೆಗೆಳಿಗೆ ಹಾನಿ ಸೇರಿದಂತೆ ಅಪಾರ ಪ್ರಮಾಣದಲ್ಲಿ‌ ಆಸ್ತಿಪಾಸಿಗಳು ಹಾನಿಯಾದ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಮಳೆ ಹಾನಿ ಪೀಡಿತ ಜಿಲ್ಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಾಳೆಯಿಂದ ಎರಡು ದಿನಗಳ ಕಾಲ ನಾಲ್ಕು ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಭೇಟಿ‌ ನೀಡಿ ಮಳೆ ಹಾನಿ ಸಂತ್ರಸ್ತರ ಅಹವಾಲು...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನ ರುದ್ರಗುಪ್ಪೆ ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆ ; ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ, ಪರಿಶೀಲನೆ – ಕಹಳೆ ನ್ಯೂಸ್

ಮಡಿಕೇರಿ (ಜೂ.29): ದಕ್ಷಿಣ ಕೊಡಗಿನ ಬಿಟ್ಟಂಗಾಲ ಸಮೀಪದ 2ನೇ ರುದ್ರಗುಪ್ಪೆಯಲ್ಲಿ ಕಾಫಿ ತೋಟವೊಂದರಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆಯೇ ಈ ಹುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. 2ನೇ ರುದ್ರಗುಪ್ಪೆಯ ತೋತೇರಿ ಬಳಿಯ ನಾಜಗೊಲ್ಲಿ ಎಂಬಲ್ಲಿನ ಕಾಫಿ ತೋಟವೊಂದರಲ್ಲಿ ಹುಲಿಯ ಮೃತದೇಹ ಮಂಗಳವಾರ ಸಂಜೆ ಕಂಡುಬಂದಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಕಳೆದ ಕೆಲವು ತಿಂಗಳುಗಳಿಂದ ಈ ಭಾಗದಲ್ಲಿ ಹುಲಿಯೊಂದು ಸಂಚರಿಸುತ್ತಾ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿತ್ತು. 2ನೇ ರುದ್ರಗುಪ್ಪೆಯ...
ಕೊಡಗುದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಯತ್ನದ ಫಲ | ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರ – ಹೆದ್ದಾರಿ ಸಚಿವರ ಸಭೆಯಲ್ಲಿ ನಿರ್ಧಾರ ; ಮಾಣಿಯಿಂದ ಸಂಪಾಜೆವರೆಗೆ ಚತುಷ್ಪಥ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆದೇಶ – ಕಹಳೆ ನ್ಯೂಸ್

ನವದೆಹಲಿ, ಮಾ. 16 : ಸಾಕಷ್ಟು ಹೋರಾಟಗಳು ಪ್ರತಿಭಟನೆಯ ಬಳಿಕ ಇದೀಗ ಸುರತ್ಕಲ್ ಟೋಲ್ ಗೇಟನ್ನು ಸ್ಥಳಾಂತರಗೊಳಿಸಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.   ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ನೇತೃತ್ವದಲ್ಲಿ ಸುರತ್ಕಲ್ ಟೋಲ್ ವಿಚಾರದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯವಾಗಿ ಸುರತ್ಕಲ್ ಟೋಲ್...
ಕೊಡಗುಕ್ರೈಮ್ಮಡಿಕೇರಿಸುದ್ದಿ

ಹಿಜಾಬ್​-ಕೇಸರಿ ಸಂಘರ್ಷ ; ಕೇಸರಿ ಶಾಲು ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ, ವಿದ್ಯಾರ್ಥಿಯಿಂದ ಮನನೊಂದ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಕೊಡಗು: ರಾಜ್ಯದಲ್ಲಿ ವಿಕೋಪಕ್ಕೆ ತೆರಳಿರುವ ಹಿಜಾಬ್​-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ ಪ್ರಜ್ವಲ್​ (18) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ. ಕೇಸರಿ ಶಾಲು ಧರಿಸಿದ್ದಕ್ಕೆ ಈತನ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ ಹೊರಿಸಿದ್ದಷ್ಟೇ ಅಲ್ಲದೆ ಹಲ್ಲೆಯನ್ನೂ ಮಾಡಿತ್ತು. ಇದರಿಂದ ನೊಂದು ಈತ...
ಕೊಡಗುದಕ್ಷಿಣ ಕನ್ನಡಮಡಿಕೇರಿರಾಜ್ಯಸುದ್ದಿಸುಳ್ಯ

ಹಿಂದೂ ಜಾಗರಣಾ ವೇದಿಕೆ ಪೊಲೀಸ್ ಇಲಾಖೆಗೆ ಮಾಹಿತಿ, ತಡರಾತ್ರಿ ಸಂಪಾಜೆ ಚೆಕ್‍ಪೋಸ್ಟ್ ಬಳಿ ಲಾರಿಯಲ್ಲಿ ಅಕ್ರಮ ಗೋಸಾಗಾಟ ಪತ್ತೆ ; 24 ಗೋವುಗಳ ರಕ್ಷಣೆ – ಕಹಳೆ ನ್ಯೂಸ್

ಮಡಿಕೇರಿ: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಲಾರಿಯನ್ನು ಪತ್ತೆ ಹಚ್ಚಿ 24 ಗೋವುಗಳನ್ನು ಅರಣ್ಯ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಚೆಕ್‍ಪೊಸ್ಟ್ ಬಳಿ ನಡೆದಿದೆ. ಸಂಪಾಜೆ ಅರಣ್ಯ ತಪಾಸಣಾ ಗೇಟ್ ಬಳಿ ತಡರಾತ್ರಿ ಲಾರಿಯಲ್ಲಿ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾಗ ಅರಣ್ಯ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ, ಲಾರಿ ಸಮೇತ 24 ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಅರಣ್ಯ ಇಲಾಖಾ ಸಿಬ್ಬಂದಿ ತಪಾಸಣೆಗೆ ಮುಂದಾಗುತ್ತಿದ್ದಂತೆ...
ಕೊಡಗುಸಂತಾಪಸುದ್ದಿ

ಪೊಲೀಸ್ ಸೇವೆಯಿಂದ ನಿವೃತ್ತಿ ಪಡೆಯುವ ಒಂದು ತಿಂಗಳ ಮುಂಚೆಯೇ ಕೊನೆಯುಸಿರೆಳೆದ ಮಡಿಕೇರಿಯ ಎಸ್.ಐ.ಚಿನ್ನಪ್ಪ ನಾಯ್ಕ- ಕಹಳೆ ನ್ಯೂಸ್

ಕಡಬ: ಮಡಿಕೇರಿಯಲ್ಲಿ ಎಸ್.ಐ.ಯಾಗಿ ಸೇವೆ ಸಲ್ಲಿಸುತ್ತಿದ್ದ ಸುಳ್ಯ ತಾಲೂಕು ನಡುಗಲ್ಲು ನಿವಾಸಿ ಚಿನ್ನಪ್ಪ ನಾಯ್ಕ (59) ನವೆಂಬರ್ ತಿಂಗಳಿನಲ್ಲಿ ಎಸ್.ಐ.ಆಗಿ ಭಡ್ತಿಗೊಂಡಿದ್ದರು. ಆರೋಗ್ಯವಾಗಿದ್ದ ಇವರು ರಜೆಯ ಹಿನ್ನಲೆಯಲ್ಲಿ ಮನೆಗೆ ಬಂದಿದ್ದರು. ಆದರೆ ಇಂದು ಮುಂಜಾನೆ ಏಕಾಏಕಿ ಅಸ್ವಸ್ಥಗೊಂಡ ಇವರು, ಹೃದಯಾಘಾತದಿಂದ ಅಸುನೀಗಿದ್ದಾರೆ. ಅಸ್ವಸ್ಥಗೊಂಡ ತಕ್ಷಣವೇ ಕಡಬ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದರು. ಮುಂದಿನ ತಿಂಗಳು ನಿವೃತ್ತಿ ಹೊಂದಲಿದ್ದ ಇವರು, ನಿವೃತ್ತಿಗೂ ಮುನ್ನವೇ ಬದುಕಿನ ಪಯಣಕ್ಕೆ ಪೂರ್ಣವಿರಾಮವಿಟ್ಟಿದ್ದಾರೆ. ಕಡಬ...
ಉಡುಪಿಕೊಡಗುದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ..! ; ಹವಾಮಾನ ಇಲಾಖೆ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು, ಡಿಸೆಂಬರ್ 01: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ...
ಉಡುಪಿಕೊಡಗುದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋಟರಿಗೆ ಕೊಡಗು, ಅಂಗಾರಗೆ ದಕ್ಷಿಣ ಕನ್ನಡ, ಸುನಿಲ್ ಕುಮಾರ್ ಗೆ ಉಡುಪಿ ; ಯಾವ ಯಾವ ಸಚಿವರಿಗೆ ಯಾವ ಯಾವ ಜಿಲ್ಲೆ…!? ಯಾವ ಜಿಲ್ಲೆಗೆ ಉಸ್ತುವಾರಿ ಯಾರು ಸಚಿವರು..!? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಇಂದಿನ ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ತೀರ್ಮಾನಗಳು ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ...
1 2 3 4 5 6
Page 3 of 6