ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ ;ಸನಾತನ ಸಂಸ್ಕೃತಿಯ ಎಲ್ಲಾ ಆಚರಣೆ ಹಬ್ಬಗಳಲ್ಲೂ ವಿಜ್ಞಾನ ಅಡಗಿದೆ : ಸುಬ್ರಮಣ್ಯ ನಟ್ಟೋಜ-ಕಹಳೆ ನ್ಯೂಸ್
ಪುತ್ತೂರು: ಸಂಕ್ರಾಂತಿ ದಿನದಿಂದ ಸೂರ್ಯನು ದಕ್ಷಿಣಾಯನದಿಂದ ಉತ್ತರಾಯನಕ್ಕೆ ತೊಡಗುತ್ತಾನೆ. ಮಕರ ಸಂಕ್ರಾಂತಿ ಕೃಷಿ ಚಟುವಟಿಕೆಗಳು ಮತ್ತು ಹೊಸ ಬೆಳೆಗಳ ಆಗಮನದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತದೆ. ಈ ಹಬ್ಬದ ದಿನವನ್ನು ಪ್ರಕೃತಿ ಮಾತೆಗೆ ಕೃತಜ್ಞತೆಯನ್ನು ಸಲ್ಲಿಸುವ ಹಬ್ಬವೆಂದು ಪರಿಗಣಿಸಲಾಗುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ ಮಕರ ಸಂಕ್ರಾಂತಿ...