ಮಂಗಳೂರಿ ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆ-ಕಹಳೆ ನ್ಯೂಸ್
ಪುತ್ತೂರು: ಮಂಗಳೂರಿ ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ.25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ. ಇದು ತುಸು ನಿರ್ಜನ ಪ್ರದೇಶವಾಗಿದ್ದು ಇಳಿಜಾರಿನಿಂದ ಕೂಡಿದೆ. ಬಿದ್ದ ಸ್ಥಳದಿಂದ 25 ಅಡಿಗಳಷ್ಟು ಕೆಳಭಾಗಕ್ಕೆ ಜಾರಿಗೊಂಡು ಹೋಗಿದ್ದ ಯುವಕ ಅಲ್ಲಿ...