ಉಡುಪಿಯಲ್ಲಿ ಒಂದೇ ದಿನ 281 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್
ಉಡುಪಿ, ಜು. 22 : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಬುಧವಾರದಂದು ಒಂದೇ ದಿನ 281 ಹೊಸ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಬುಧವಾರದಂದು ಅತ್ಯಧಿಕ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2686ಕ್ಕೆ ಏರಿಕೆಯಾಗಿದೆ. ಈ ನಡುವೆ, 135 ಮಂದಿಯ ಪರೀಕ್ಷಾ ವರದಿ ಬುಧವಾರದಂದು ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ ಬುಧವಾರದಂದು 24 ಮಂದಿ ಗುಣಮುಖರಾಗಿದ್ದು, ಆ ಮೂಲಕ ಒಟ್ಟು 1369 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ....