Monday, March 31, 2025

ಜಿಲ್ಲೆ

ದಕ್ಷಿಣ ಕನ್ನಡಸುದ್ದಿ

ಮಂಗಳೂರಲ್ಲಿಂದು ಕೋವಿಡ್ ಗೆ ಮತ್ತೊಂದು ಬಲಿ ; ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಸಾವು – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31ಕ್ಕೇರಿದ ಸಾವಿನ ಸಂಖ್ಯೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಇಂದು ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಕೊರೋನಾಗೆ ಬಲಿಯಾಗಿದ್ದು ಕೆಲದಿನಗಳ ಹಿಂದೆ ಅವರು ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳೂರಿನ ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

Breaking News : ಬಂಟ್ವಾಳದಲ್ಲಿ ಕರ್ತವ್ಯನಿರತ ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡಸಿದ ಅಬ್ದುಲ್ ಸಲಾಂ – ಕಹಳೆ ನ್ಯೂಸ್

ಬಂಟ್ವಾಳ : ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದ್ದ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೋಲೀಸರ ಮೇಲೆಯೇ ಹಲ್ಲೆ ನಡೆದ ಪ್ರಕರಣ ವರದಿಯಾಗಿದೆ. ಸಲಾಂ ಎಂಬ ವ್ಯಕ್ತಿ ಮಾರಕಾಯುಧದಿಂದ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಏನಿದು ಘಟನೆ : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದೆ ಎಂಬುದಾಗಿ ಬಂದ ಮಾಹಿತಿಯ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣಾ...
ಉಡುಪಿಸುದ್ದಿ

ಮಣಿಪಾಲದ ಲಾಡ್ಜ್ ನಲ್ಲಿ ಬಾಲಕಿಯ ಮೇಲೆ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ಎಸಗಿದ ಪ್ರಕರಣ ; ಆರೋಪಿ ಗ್ಲೆನ್ ಜೆಫ್ರಿ ಮಥಾಯಸ್ ಹಾಗೂ ಸುಹೇಲ್ ಗೆ 20 ವರ್ಷ ಕಠಿಣ ಶಿಕ್ಷೆ – ಕಹಳೆ ನ್ಯೂಸ್

ಉಡುಪಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲಾಡ್ಜ್ ನಲ್ಲಿ ಗ್ಯಾಂಗ್ ರೇಪ್ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಉಡುಪಿಯ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 60 ಸಾವಿರ ರೂ. ದಂಡವನ್ನು ವಿಧಿಸಿ ತೀರ್ಪು ನೀಡಿದೆ. ಸಂತ್ರಸ್ತ ಬಾಲಕಿಯ ತಾಯಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಗ್ಲೆನ್ ಜೆಫ್ರಿ ಮಥಾಯಸ್ ಹಾಗೂ ಸುಹೇಲ್ ಎಂ. ಎಂಬವರನ್ನು ಬಂಧಿಸಿದ್ದರು....
ಉಡುಪಿಕುಂದಾಪುರಸುದ್ದಿ

ಉಡುಪಿಯಲ್ಲಿ ಮತ್ತೆ ಇಂದು 22 ಕೊರೊನಾ ಪಾಸಿಟಿವ್ ; 28 ಮಂದಿ ಡಿಸ್ಚಾರ್ಜ್ – ಕಹಳೆ ನ್ಯೂಸ್

ಉಡುಪಿ, ಜು.09 : ಜಿಲ್ಲೆಯಲ್ಲಿ ಗುರುವಾರದಂದು ಮತ್ತೆ 22 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ 28 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಗುರುವಾರದಂದು ಜಿಲ್ಲೆಯಲ್ಲಿ 843 ರಿಪೋರ್ಟ್ ನೆಗೆಟಿವ್ ಆಗಿವೆ. ಇನ್ನು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದೆ. ಇನ್ನು ಕೂಡ 2433 ಮಂದಿಯ ವರದಿಗಳು ಕೈ ಸೇರಲು ಬಾಕಿ ಇದೆ. ಜಿಲ್ಲೆಯಲ್ಲಿ ಒಟ್ಟು 223 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿ ಕ್ಷೇತ್ರದಲ್ಲಿ ಹರಕೆಹೊತ್ತ ಶಿಕ್ಷಣ ಸಚಿವರು ; ನಾಳೆ ಇತಿಹಾಸ ಪ್ರಸಿದ್ಧ ಪೊಳಲಿಗೆ ಸಚಿವ ಎಸ್ ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬಂಟ್ವಾಳ, ಜು 09 : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದ ಹಿನ್ನೆಲೆ ರಾಜ್ಯ ಶಿಕ್ಷಣ ಸಚಿವ ಎಸ್‌‌.ಸುರೇಶ್‌ ಕುಮಾರ್‌ ಅವರು ಜು 10ರಂದು ಬಂಟ್ವಾಳಕ್ಕೆ ಆಗಮಿಸಿ ಪೊಳಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ಶಿಕ್ಷಣ ಸಚಿವರು ಈ ಹಿಂದೆ ಆಗಮಿಸಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹರಕೆ ಹೊತ್ತುಕೊಂಡಿದ್ದರು ಎಂದು ತಿಳಿಸಿದರು. ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಪುತ್ತೂರಿನ ಕೂರ್ನಡ್ಕದ ಬಾಣಂತಿ ಸಾವಿನ ಬೆನ್ನಲ್ಲೇ,10 ದಿನದ ಶಿಶುವಿಗೂ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು, ಜು 09 : ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ.   ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ‘ ಡೆಂಗ್ಯೂ ನಿಯಂತ್ರಣಕ್ಕಾಗಿ ಆಂದೋಲನ, ಸ್ವಚ್ಚ ಮನೆ ಪ್ರಶಸ್ತಿ’ ; ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಘೋಷಣೆ – ಕಹಳೆ ನ್ಯೂಸ್

ಬೆಳ್ತಂಗಡಿ, ಜು. 09 : ಸ್ವಚ್ಛತೆಯ ಕೊರತೆಯಿಂದಾಗಿ ಡೆಂಗ್ಯೂ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಹರಡುತ್ತಿದೆ. ಹಾಗಾಗಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸ್ವಚ್ಚತೆ ಅತೀ ಮುಖ್ಯವಾಗಿದ್ದು, ಸಾರ್ವಜನಿಕರಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು ಸ್ವಚ್ಚ ಮನೆ ಆಂದೋಲನ ನಡೆಸಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆರೋಗ್ಯ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ.   ಜುಲೈ ೮ರಂದು ಬೆಳ್ತಂಗಡಿ ತಾಲೂಕು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಾಲೂಕಿನಲ್ಲಿರುವ 248 ಆಶಾಕಾರ್ಯಕರ್ತೆಯರು ತಮ್ಮ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ವಾಮದಪದವಿನಲ್ಲಿ ಕರ್ತವ್ಯನಿರತ ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ, ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಚೆನ್ನೈ ತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟು ಎಂಬಲ್ಲಿ ವ್ಯಕ್ತಿಯೋರ್ವ ಕೊರೋನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆಗೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಿಂದ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ, ಇಲ್ಲಿಗೆ ಸಮೀಪದ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿರುವ ವ್ಯಕ್ತಿ. ಇಂದು ಬೆಳಿಗ್ಗೆ ಎಂದಿನಂತೆ ಮಮತಾ ಅವರು...
1 687 688 689 690 691 697
Page 689 of 697
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ