Monday, March 31, 2025

ಜಿಲ್ಲೆ

ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಪಾರೆಂಕಿಯ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಪಾರೆಂಕಿ ಗ್ರಾಮದ ಒಂದೇ ಕುಟುಂಬದ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢವಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮಡಂತ್ಯಾರಿನ ಸಂಬಂಧಿಕರ ಮನೆಯಲ್ಲಿದ್ದು ಮೀನು ಮಾರಾಟ ಮಾಡುತ್ತಿದ್ದ ಓರ್ವ ಪುರುಷರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಆ ಪೈಕಿ ಆ ಸಂಬಂಧಿಕರ ಮನೆಯ ಇಬ್ಬರು ಮಹಿಳೆಯರು , ಇಬ್ಬರು ಪುರುಷರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು ಇಂದು ಇದರ ವರದಿ ನಾಲ್ಕು ಜನರಿಗೂ ಪಾಸಿಟಿವ್ ಬಂದಿದೆ. ಈ ಮೂಲಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಚಾರ್ಮಾಡಿ ಘಾಟ್ ಬಂದ್! – ಕಹಳೆ ನ್ಯೂಸ್

ಬೆಳ್ತಂಗಡಿ: ಚಿಕ್ಕಮಗಳೂರು-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿಯುವ ಭೀತಿ ಎದುರಾಗಿದ್ದು ಇದನ್ನು ತಪ್ಪಿಸಲು ಘಾಟ್ ನಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ತಿಳಿಸಿದ್ದಾರೆ. ಕಳೆದ ವರ್ಷದ ಮಳೆಗಾಲದಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆಯೇ ಮಾಯವಾಗಿತ್ತು. ಕಳೆದೊಂದು ವಾರದಿಂದ ಚಿಕ್ಕಮಗಳೂರು, ಕೊಟ್ಟಿಗೆಹಾರ, ಮೂಡಿಗೆರೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಮಣ್ಣು...
ದಕ್ಷಿಣ ಕನ್ನಡಸುಳ್ಯ

ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯರು, ನರ್ಸ್ ಗಳ ಸಹಿತ 6 ಮಂದಿಗೆ ಕೊರೊನಾ ಪಾಸಿಟಿವ್ ; ಆತಂಕದಲ್ಲಿ ಜನತೆ – ಕಹಳೆ ನ್ಯೂಸ್

ಸುಳ್ಯ: ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯರು, ನರ್ಸ್ ಗಳು ಸೇರಿ ಒಟ್ಟು ಆರು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಯೊಬ್ಬರಿಗೆ ಕೊರೊನಾ ಬಂದಿತ್ತು. ಬಳಿಕ ಅವರು ಮಂಗಳೂರಿಗೆ ಹೋಗಿದ್ದರು. ಆ ವ್ಯಕ್ತಿಗೆ ಚಿಕಿತ್ಸೆ ‌ನೀಡಿದ್ದ ನರ್ಸ್ ಗೆ ಕೂಡಾ ಕೊರೊನಾ ದೃಢವಾಗಿತ್ತು. ಸರಕಾರಿ ಆಸ್ಪತ್ರೆಯ ಒಬ್ಬರು ವೈದ್ಯಾಧಿಕಾರಿ, ಮೂವರು ನರ್ಸ್ ಹಾಗೂ ಇಬ್ಬರು ಡಯಾಲಿಸಿಸ್ ವಿಭಾಗದ ತಂತ್ರಜ್ಞರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಪುತ್ತೂರು ಪ್ರಗತಿ ಸ್ಟಡಿಸೆಂಟರ್ ನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 12 ಆದಿತ್ಯವಾರದಿಂದ ಆನ್‍ಲೈನ್ ಶಿಕ್ಷಣ ಆರಂಭ-ಕಹಳೆ ನ್ಯೂಸ್

  covid-19ರ ಆತಂಕದ ನಡುವಿನಲ್ಲಿಯೇ ಶಿಕ್ಷಣದ ಮಹತ್ವದ ಘಟ್ಟವಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಉತ್ತಮ ರೀತಿಯಲ್ಲಿ ನೆರವೇರಿದೆ. ಮುಂದಿನ ವ್ಯಾಸಂಗಕ್ಕೆ ಅತ್ಯಮೂಲ್ಯ ಸಮಯವನ್ನು ವ್ಯರ್ಥಗೊಳಿಸದಂತೆ ತಡೆಗಟ್ಟುವುದು ಮುಂದಿನ ಮಹತ್ವದ ಹೆಜ್ಜೆಯಾಗಿದೆ. ಆದ್ದರಿಂದ ಎಸ್.ಎಸ್.ಎಲ್.ಸಿ ಮುಗಿಸಿ, ಪ್ರಥಮ ಪಿಯುಸಿಗೆ ಪಾದಾರ್ಪಣೆಗೊಳ್ಳಲಿರುವ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಮೂಲಕ ಶಿಕ್ಷಣವನ್ನು ಜುಲೈ 12 ಆದಿತ್ಯವಾರದಿಂದ ಪ್ರಾರಂಭಿಸುವುದಾಗಿ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ) ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್ ಶಿಕ್ಷಣ ಸಂಸ್ಥೆಯು ನಿರ್ಧರಿಸಿದೆ. 2020-21ನೇ ಶೈಕ್ಷಣಿಕ ವರ್ಷದ...
ಜಿಲ್ಲೆಸುದ್ದಿ

ಅಡಿಕೆ ಮರ ರೋಗಗಳಿಗೆ ಔಷಧಿ ಸಿಂಪಡಿಸುವುದು ಅಗತ್ಯ: ತೋಟಗಾರಿಕೆ ಇಲಾಖೆ-ಕಹಳೆ ನ್ಯೂಸ್

ಮಂಗಳೂರು,ಜು.08(ಹಿ.ಸ): ಅಡಿಕೆ ಎಲೆ ಚುಕ್ಕೆ ರೋಗವು ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಶಿಲೀಂದ್ರ ರೋಗವಾಗಿದ್ದು, ಎಲೆಗಳ ಮೇಲೆ ತೇವಾಂಶ ಇದ್ದಾಗ ಈ ರೋಗ ಕಂಡು ಬರುತ್ತದೆ. ಮೊದಲು ತಳಭಾಗದ ಎಲೆಗಳ ಮೇಲೆ ಕಂದುಬಣ್ಣದ ಸಣ್ಣ ಸಣ್ಣ ಚುಕ್ಕೆಗಳು ಕಂಡು ಬಂದು ನಂತರ ಒಂದು ರೂಪಾಯಿ ನಾಣ್ಯದಷ್ಟು ಅಗಲವಾಗುತ್ತದೆ. ನಂತರ ಇಡೀ ಎಲೆಗಳಿಗೆ ಹರಡಿ ಎಲೆಗಳು ಒಣಗುತ್ತವೆ. ಇದರಿಂದ ಆಹಾರ ತಯಾರಿಕೆ ಕಡಿಮೆಯಾಗಿ ಅಡಿಕೆ ಕಾಯಿ ಗಾತ್ರ, ಗುಣಮಟ್ಟ ಮತ್ತು ಇಳುವರಿ ಕಡಿಮೆಯಾಗುತ್ತದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ ಉಪ್ಪಿನಂಗಡಿ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ ; ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್‌ರಿಂದ ಪದಪ್ರಧಾನ – ಕಹಳೆ ನ್ಯೂಸ್

ಉಪ್ಪಿನಂಗಡಿ: ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 10ರಂದು ಉಪ್ಪಿನಂಗಡಿ ರೋಟರಿ ಸಮುದಾಯ ಭವನದಲ್ಲಿ ಜರಗಲಿದೆ ಎಂದು ಉಪ್ಪಿನಂಗಡಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ರವೀಂದ್ರ ದರ್ಭೆ ತಿಳಿಸಿದರು. ಅವರು ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಮಾತನಾಡಿ, ರೋಟರಿ ವಲಯ-4ರ ಸಹಾಯಕ ಗವರ್ನರ್ ಹಾಗೂ ವಿಧಾನ ಪರಿಷತ್ ಸದಸ್ಯ  ಪ್ರತಾಪಸಿಂಹ ನಾಯಕ್ ಪದಪ್ರಧಾನ ಮಾಡಲಿದ್ದಾರೆ. ರೋಟರಿ ವಲಯ ಸೇನಾನಿ ಜೆರೋಮಿಯಸ್ ಪಾಯಸ್, ಮಾತೃ ಘಟಕವಾದ ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮೂಲದ 32 ವರ್ಷದ ಮಹಿಳೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮೂರು ಮಂದಿ ಬಲಿ ; ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 29ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 08 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.08 ರ ಬುಧವಾರ ಕೊರೊನಾದಿಂದ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲ ನಿವಾಸಿಯಾಗಿದ್ದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಕೊರೊನಾ...
ದಕ್ಷಿಣ ಕನ್ನಡ

ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಜು 08 : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಸಮಯದಲ್ಲೇ ಜನಪ್ರತಿನಿಧಿಗಳಿಗೂ ಸೋಂಕು ತಗುಲುತ್ತಿರುವುದು ದೃಢವಾಗುತ್ತಿದೆ. ಈಗಾಗಲೇ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಾಜಿ ಎಂಎಲ್ ಸಿ ಪುಟ್ಟಣ್ಣ, ಕುಣಿಗಲ್ ಶಾಸಕ ಎಚ್ ಡಿ ರಂಗನಾಥ್, ಎಂ.ಕೆ ಪ್ರಾಣೇಶ್, ಜನಾರ್ದನ ಪೂಜಾರಿ , ಸಂಸದೆ ಸುಮಲತಾ ಹೀಗೆ ಹಲವು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೀಗ ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ಕಾರ್ಪೋರೇಟರ್ ಗೂ ಕೊರೊನಾ ಸೋಂಕು ತಗುಲಿದ್ದು , ಈ...
1 688 689 690 691 692 697
Page 690 of 697
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ