ದಕ್ಷಿಣ ಕನ್ನಡ ಜಿಲ್ಲೆಗೆ ವಿಷಮ ಆದಿತ್ಯವಾರ ; ಇಂದು ಒಂದೇ ದಿನ 147 ಮಂದಿಯಲ್ಲಿ ಕೊರೊನಾ ಪಾಸಿಟಿವ್ – 38 ಮಂದಿ ಗುಣಮುಖ – ಕಹಳೆ ನ್ಯೂಸ್
ಮಂಗಳೂರು, ಜು. 05 : ದ.ಕ. ಜಿಲ್ಲೆಯಲ್ಲಿ ರವಿವಾರ ಒಂದೇ ದಿನ ಬರೋಬ್ಬರಿ 147 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 1232ಕ್ಕೆ ಏರಿಕೆಯಾಗಿದೆ. ರವಿವಾರದಂದು ಒಟ್ಟು 378 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದ್ದು ಈ ಪೈಕಿ 231 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ರವಿವಾರದಂದು ಜಿಲ್ಲೆಯಲ್ಲಿ 38 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ 554 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 666 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ...