ಪಿ ಯು ವಿದ್ಯಾರ್ಥಿಗಳಿಗೆ ಆಪ್ತ-ಸಮಾಲೋಚನೆ ಅತ್ಯಗತ್ಯ – ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್-ಕಹಳೆ ನ್ಯೂಸ್
ಮಂಗಳೂರು: ಯಶಸ್ಸಿನ ಹಿಂದೆ ಓಡಬೇಕೆಂಬ ಛಲವಿರುವ ಈಗಿನ ಪಿ ಯು ವಿದ್ಯಾರ್ಥಿಗಳಿಗೆ ಸರಿಯಾದ ಹಂತದಲ್ಲಿ ಸಮರ್ಥವಾದ ಆಪ್ತ- ಸಮಾಲೋಚನಾ ಮಾರ್ಗದರ್ಶನ ಬೇಕೇ-ಬೇಕು ಎಂದು ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್ ಸಂಸ್ಥೆಯ ಮಾಜೀ ಹಿರಿಯ ಮನೋವೈದ್ಯ, ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್‌ರವರು ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಏರ್ಪಡಿಸಿದ್ದ ಮಾನಸ ಮಾರ್ಗದರ್ಶನ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅತೀ ಕಿರಿಯ ವಯಸ್ಸಿನಲ್ಲಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ, ಯಶಸ್ಸುಗಳಿಸಬೇಕೆಂಬ ಛಲವಿರುವ...