Tuesday, April 15, 2025

ಜಿಲ್ಲೆ

ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 311 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಎಂಟು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 311 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ 238 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ಆರು ಮಂದಿ ಸಾವನ್ನಪ್ಪಿದ್ದರು. ಆದರೆ, ಇಂದು‌ ಎಂಟು ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ....
ಕಾಸರಗೋಡುಮಂಜೇಶ್ವರ

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 32 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು 17 : ಜಿಲ್ಲೆಯಲ್ಲಿ ಶುಕ್ರವಾರ 32 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 24 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ.   ಚೆಂಗಳದ 12 ಮಂದಿ, ಚೆಮ್ನಾಡ್ ನ 6 ಮಂದಿ, ಮಂಜೇಶ್ವರದ 5 ಮಂದಿ, ಕುಂಬಳೆಯ ನಾಲ್ವರು, ಕಾರಡ್ಕದ ಇಬ್ಬರು, ಮೊಗ್ರಾಲ್ ಪುತ್ತೂರು, ಪಿಲಿಕ್ಕೋಡ್, ಕಾಸರಗೋಡಿನ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಐದು ಮಂದಿ ವಿದೇಶದಿಂದ, ಮೂವರು ಹೊರ ರಾಜ್ಯಗಳಿಂದ ಬಂದವರಾಗಿದ್ದಾರೆ. ಈ ನಡುವೆ 12...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿಯ ಪುತ್ತಿಲದ ವ್ಯಕ್ತಿ ಮೃತ್ಯು ; ಕೊರೋನಾ ಸೋಂಕು ದೃಢ – ಕಹಳೆ ನ್ಯೂಸ್‌

ಪುತ್ತೂರು: ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಜು. 17ರಂದು ಮೃತಪಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಕೊರೋನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಜು.14ರಂದು ಬೆಳ್ತಂಗಡಿ ತಾಲೂಕಿನ ಪುತ್ತಿಲದ ಸುಮಾರು 57 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಜು. 16ರಂದು ಅವರ ಗಂಟಲು ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. 17ರಂದು ಆ ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ವ್ಯಕ್ತಿ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಖೋಡೆಸ್ ರಮ್ ಕುಡಿದ್ರೆ ಕೊರೊನಾ ಓಡುತ್ತೆ ; ಉಳ್ಳಾಲ ಕಾಂಗ್ರೆಸ್ ಕೌನ್ಸಿಲರ್ ಬಿಟ್ಟಿ ಸಲಹೆ – ಕಹಳೆ ನ್ಯೂಸ್

ಮಂಗಳೂರು: ಖೋಡೆಸ್ ರಮ್ ಕುಡಿದ್ರೆ ಕೊರೊನಾ ವೈರಸ್ ಹತ್ತಿರನೇ ಸುಳಿಯೋದಿಲ್ಲ ಎಂದು ಉಳ್ಳಾಲನಗರ ಸಭೆಯಲ್ಲಿ ಕಾಂಗ್ರೆಸ್ ಕೌನ್ಸಿಲರ್ ಹೇಳಿದ ಬಿಟ್ಟಿ ಉಪದೇಶ ಇದೀಗ ಎಲ್ಲರ ಟೀಕೆಗೆ ಗುರಿಯಾಗಿದೆ. ಉಳ್ಳಾಲ ನಗರ ಸಭೆಯ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ, ಮದ್ಯದ ಬಾಟಲಿ ಹಿಡಿದುಕೊಂಡು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತಾನು ಕುಡಿಯುವುದಿಲ್ಲ ಎಂದು ಹೇಳಿಕೊಂಡು ಮದ್ಯ ತುಂಬಿದ ಬಾಟಲಿ ಹಿಡಿದು ಜನಸಾಮಾನ್ಯರಿಗೆ ಖೋಡೆಸ್ ರಮ್ ಕುಡಿಯಲು ಸಲಹೆ ನೀಡುತ್ತಿರುವ ವೀಡಿಯೋ ವೈರಲ್...
ಉಡುಪಿಸುದ್ದಿ

ಉಡುಪಿಯಲ್ಲಿ ಮತ್ತೆ 84 ಜನರಿಗೆ ಪಾಸಿಟಿವ್‌ – 2 ಸಾವಿರದ ಗಡಿಯತ್ತ ಸೋಂಕಿತರ ಸಂಖ್ಯೆ – ಕಹಳೆ ನ್ಯೂಸ್

ಉಡುಪಿ, ಜು.17 : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲ್ಲೇ ಇದ್ದು ಇಂದು ಮತ್ತೆ 84 ಜನರಲ್ಲಿ ಕೊರೊನಾ ಪಾಸಿಟಿವ್‌ ಆಗಿದೆ. ಜಿಲ್ಲೆಯಲ್ಲಿ ಒಟ್ಟು ದಾಖಲಾದ ಸೋಂಕು ಪ್ರಕರಣಗಳು 2 ಸಾವಿರದ ಗಡಿಯತ್ತ ತಲುಪಿದ್ದು ಈವರೆಗೆ 1979 ಪ್ರಕರಣ ದಾಖಲಾಗಿದೆ. ಇಂದು ಜಿಲ್ಲೆಯಲ್ಲಿ 393 ಕೊರೊನಾ ವರದಿಗಳು ಲಭ್ಯವಾಗಿದ್ದು ಈ ಪೈಕಿ 309 ವರದಿಯು ನೆಗೆಟಿವ್‌ ಆಗಿದ್ದರೆ ಉಳಿದ 84 ವರದಿ ಪಾಸಿಟಿವ್‌ ಆಗಿದೆ. ಇನ್ನು ಕೂಡಾ 84 ಜನರ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆ

ಮೂಡುಬಿದಿರೆಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಮೀನು ವ್ಯಾಪಾರಿ ‘ ಬೋಲ್ಟ್ ‘ ಆಸಿಫ್..! – ಕಹಳೆ ನ್ಯೂಸ್

ಮೂಡುಬಿದಿರೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಮಾರ್ಪಾಡಿಯ ಮೀನು ವ್ಯಾಪಾರಿಯೊಬ್ಬ ಅತ್ಯಾಚಾವೆಸಗಿದ ಘಟನೆ ಮೂಡುಬಿದಿರೆಯ ಮಾರ್ಪಾಡಿಯಲ್ಲಿ ನಡೆದಿದೆ. ಸ್ಥಳೀಯ ಮೀನು ವ್ಯಾಪಾರಿ ಆಸಿಫ್ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಮೀನು ವ್ಯಾಪಾರಿ ಅಸೀಫ್ , ತಾನು ವಾಸವಿದ್ದ ಪರಿಸರದಲ್ಲೇ ವಾಸ್ತವ್ಯವಿದ್ದ ತಮಿಳು ಮೂಲದ ಕೂಲಿ ಕಾರ್ಮಿಕರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳ ಜತೆ ಈತ ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಮನೆ ಹತ್ತಿರದ ಗುಡ್ಡೆಯಲ್ಲಿ ಅತ್ಯಾಚಾರವೆಸಗಿದ್ದ...
ಕೊಡಗುಸುದ್ದಿ

ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗು ಸಂಪೂರ್ಣ ಲಾಕ್‍ಡೌನ್ ; ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ -ಕಹಳೆ ನ್ಯೂಸ್

ಮಡಿಕೇರಿ: ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗಿನಲ್ಲಿ ಸಂಪೂರ್ಣವಾಗಿ ಲಾಕ್‍ಡೌನ್ ಮಾಡುವುದಾಗಿ ಕೊಡಗಿನ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ. ಜಿಲ್ಲೆಗೆ ವಾರಾಂತ್ಯದಲ್ಲಿ ಹೊರಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಂತೆ ಬೇರೆ ಬೇರೆ ಕಡೆಗಳಿಂದ ಜನರು ಬರುತ್ತಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ಸೋಮವಾರದವರೆಗೆ ಜಿಲ್ಲಾ ಮಟ್ಟದಲ್ಲಿ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ. ತರಕಾರಿ, ಮೆಡಿಕಲ್ ಶಾಪ್‍ಗಳು, ಪೆಟ್ರೋಲ್ ಬಂಕ್‍ಗಳು ಸೇರಿದಂತೆ ಕಾರ್ಮಿಕರ ಅನುಕೂಲ ನೋಡಿಕೊಂಡು...
ಉಡುಪಿಸುದ್ದಿ

ಉಡುಪಿಯಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿದವರನ್ನು ವೈಜ್ಞಾನಿಕವಾಗಿ ಪತ್ತೆ ಹಚ್ಚಿ ಕಠಿಣ ಕ್ರಮ ; ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ – ಕಹಳೆ ನ್ಯೂಸ್

ಉಡುಪಿ, ಜು 17 : ಜಾಗತಿಕ ಸೋಂಕಾಗಿರುವ ಕೋವಿಡ್-19 ರೋಗವು ಹರಡುವುದನ್ನುನಿಯಂತ್ರಣ ಮಾಡುವ ಹಾಗೂ ಇದರಿಂದಾಗಿ ಉಂಟಾಗುವ ಅನಾರೋಗ್ಯ ಸ್ಥಿತಿ ಮತ್ತು ಮರಣಗಳನ್ನು ತಡೆಗಟ್ಟುವ ಸಲುವಾಗಿ ಕೋವಿಡ್ ಪಾಸಿಟಿವ್ ಆಗಿರುವ ವ್ಯಕ್ತಿಗಳನ್ನು ,ಪ್ರಥಮ ಸಂಪರ್ಕಿಸಿರುವ ವ್ಯಕ್ತಿಗಳನ್ನು ಹಾಗೂ ಹೊರ ರಾಜ್ಯ/ದೇಶ ದಿಂದ ಬರುವ ವ್ಯಕ್ತಿಗಳನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗುತ್ತದೆ.   ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮದ ಹಿತದೃಷ್ಟಿಯಿಂದ ಹೊರ ರಾಜ್ಯ/ದೇಶ ಪ್ರಯಾಣಿಕರು, ಕೋವಿಡ್-19 ಸೋಂಕಿತರು...
1 698 699 700 701 702 712
Page 700 of 712
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ