ಶೌಚಾಲಯದಲ್ಲಿ ನವಜಾತ ಶಿಶುವಿನ ಮೃ*ತದೇಹ ಪತ್ತೆ-ಕಹಳೆ ನ್ಯೂಸ್
ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃ*ತದೇಹ ಪತ್ತೆಯಾಗಿದೆ. ಮಸೀದಿಯ ವ್ಯವಸ್ಥಾಪಕ ಸುಹೇಲ್ ಅವರು ನಿನ್ನೆ ಶೌಚಾಲಯಕ್ಕೆ ಹೋದಾಗ ಮೃ*ತಪಟ್ಟ ಸ್ಥಿತಿಯಲ್ಲಿ ನವಜಾತ ಶಿಶುವನ್ನು ಗಮನಿಸಿದ್ದಾರೆ. ತಕ್ಷಣವೇ ಅವರು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದು, ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮದುವೆಯಾಗದ ಯುವತಿ...