‘ಸಾಮಾಜಿಕ ಅಸ್ಥಿರತೆ ಬಾಲ್ಯ ವಿವಾಹಕ್ಕೆ ಕಾರಣ’-ಕಹಳೆ ನ್ಯೂಸ್
ಉಡುಪಿ: 'ಸಾಮಾಜಿಕ ಅಸ್ಥಿರತೆಯಿಂದಾಗಿ ಇಂದಿಗೂ ಬಾಲ್ಯವಿವಾಹ ಪದ್ಧತಿ ನಮ್ಮ ಸಮಾಜದಲ್ಲಿದೆ' ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೊ ಬೇಟಿ ಪಢಾವೊ ಅಭಿಯಾನದ ಪ್ರಯುಕ್ತ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನ್ಯಾಯಾಲಯ ಹಾಗೂ ಪೊಲೀಸ್ ಠಾಣೆ...