ಕಾರ್ಕಳದ ಹಿಂದೂ ಯುವತಿ ಮುಸ್ಲಿಂ ಯುವಕನಿಂದ ಅತ್ಯಾಚಾರ ಪ್ರಕರಣ : ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲ ; ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಛಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ – ಕಹಳೆ ನ್ಯೂಸ್
ಉಡುಪಿ: ಕರ್ನಾಟಕದ ಏಕೈಕ ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ರಾಜ್ಯದ ಮಹಿಳೆಯರಿಗೆ ಕೇವಲ ಭಾಗ್ಯ ಲಕ್ಷ್ಮೀ ಯೋಜನೆ ಮಾತ್ರ ನೀಡಿದರೆ ಸಾಲದು ರಕ್ಷಣೆಯ ಗ್ಯಾರಂಟಿಯನ್ನು ನೀಡಬೇಕು. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ...