ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ವನಮಹೋತ್ಸವ ಕಾರ್ಯಕ್ರಮ -ಕಹಳೆ ನ್ಯೂಸ್
ಉಡುಪಿ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ನಿತ್ಯ ಈ ಬಗ್ಗೆ ಜಾಗೃತಿ ವಹಿಸುವುದು ಅತೀ ಅವಶ್ಯವಾಗಿದೆ. ಇಲ್ಲವಾದರೆ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಧ್ಯಾತ್ಮಿಕ ನಿರ್ದೇಶಕರಾದ ವಂ| ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು. ಅವರು ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಶಿರ್ವ ವಲಯ, ಘಟಕ ಹಾಗೂ ಮಟ್ಟಾರು ಗ್ರಾಮಪಂಚಾಯತ್ ಸದಸ್ಯರ ಸಹಕಾರದೊಂದಿಗೆ ಎಸ್...