Friday, January 24, 2025

ಉಡುಪಿ

ಉಡುಪಿಸುದ್ದಿ

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ– ಕಹಳೆ ನ್ಯೂಸ್

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇದರ ವತಿಯಿಂದ ಬೈಂದೂರು ಯೆಡ್ತರೆ ಜೆ.ಎಸ್.ಆರ್ ಸಭಾಂಗಣದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲೆಯ 350 ಶಾಲೆಗಳ ವಿದ್ಯಾರ್ಥಿಗಳಿಗೆ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಸಮಾರಂಭದಲ್ಲಿ ಸಂಸ್ಥೆಯ ಪ್ರವರ್ತಕರಾದ ಡಾ. ಎಚ್. ಎಸ್. ಶೆಟ್ಟಿ, ಕರ್ನಾಟಕ...
ಉಡುಪಿಸುದ್ದಿ

‘ರಾಜಕಾರಣ ಮತ್ತು ಆದರ್ಶಕ್ಕೆ ಇನ್ನೊಂದು ಹೆಸರು ಡಾ! ವಿ.ಎಸ್. ಆಚಾರ್ಯ’ : ಸಂಸದ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ರಾಜ್ಯದ ಗೃಹ ಸಚಿವರಾಗಿದ್ದ ಡಾ! ವಿ.ಎಸ್. ಆಚಾರ್ಯ ಅವರ ಕಾರ್ಯತತ್ಪರತೆ, ಜವಾಬ್ದಾರಿ, ಹೊಣೆಗಾರಿಕೆ, ಕರ್ತವ್ಯ ನಿಷ್ಠೆ ಎಲ್ಲರಿಗೂ ಪ್ರೇರಣಾದಾಯಕ. ಅವರ ಜೀವನಾದರ್ಶ ಎಂದಿಗೂ ಅನುಕರಣೀಯ. ರಾಜಕೀಯವನ್ನು ವೃತ್ತಿಯಾಗಿಸದೇ ವೃತವಾಗಿ ಸ್ವೀಕರಿಸಿ ಜನ ಸೇವೆಗೈದವರು. ರಾಜಕಾರಣ ಮತ್ತು ಆದರ್ಶಕ್ಕೆ ಇನ್ನೊಂದು ಹೆಸರು ಡಾ! ವಿ.ಎಸ್. ಆಚಾರ್ಯ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ‌ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ದೀನದಯಾಳ್ ಚಾರಿಟೇಬಲ್ ಟ್ರಸ್ಟ್(ರಿ.) ವತಿಯಿಂದ ನಗರಸಭಾ ವ್ಯಾಪ್ತಿಯ ಪ್ರೌಢಶಾಲೆಗಳಲ್ಲಿ ಎಸೆಸೆಲ್ಸಿಯಲ್ಲಿ ಅತಿಹೆಚ್ಚು ಅಂಕ...
ಉಡುಪಿ

ಉಡುಪಿ: ಜು.10ರಿಂದ 18ರವರೆಗೆ ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಣಾ ತಪಾಸಣಾ ಶಿಬಿರ– ಕಹಳೆ ನ್ಯೂಸ್

ಉಡುಪಿ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಎ.ಡಿ.ಐ.ಪಿ ಮತ್ತು ಆರ್.ವಿ.ವೈ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಸಲುವಾಗಿ ಇದೇ ಜುಲೈ 10ರಿಂದ 18ರ ವರೆಗೆ ಉಡುಪಿ ಜಿಲ್ಲೆಯಾದ್ಯಂತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ರೆಡ್ ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಅವರು, ಜುಲೈ...
ಉಡುಪಿಸುದ್ದಿ

ಜಿಲ್ಲಾ ಬಿಜೆಪಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯ ಜನ್ಮ ದಿನಾಚರಣೆ – ಕಹಳೆ ನ್ಯೂಸ್

ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ನವ ಉಡುಪಿಯ ನಿರ್ಮಾತೃ ಕೀರ್ತಿಶೇಷ ಡಾ! ವಿ ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆಯು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪ್ರಾಸ್ತಾವಿಕವಾಗಿ ಮಾತನಾಡಿ ಡಾ! ಶಾಮ ಪ್ರಸಾದ್ ಮುಖರ್ಜಿ ಮತ್ತು ಡಾ! ವಿ.ಎಸ್. ಆಚಾರ್ಯ ಅವರ ದೂರದರ್ಶಿತ್ವದ...
ಉಡುಪಿಶಿಕ್ಷಣಸುದ್ದಿ

ಬ್ರಹ್ಮಾವರದ ಜಿ . ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ – ಕಹಳೆ ನ್ಯೂಸ್

ಬ್ರಹ್ಮಾವರದ ಜಿ . ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಡಾಕ್ಟರ್ ರೆನಾಲ್ಡೋ ಸೀಕ್ವೆರ , ಎಕ್ಸಿಕ್ಯೂಟಿವ್ ಡೈರೆಕ್ಟರ್ ವಿ. ಆರ್. ಎ. ಸೋಲ್ಯೂಶನ್ ಮಂಗಳೂರು ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ , ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸುಪ್ತವಾದ ಪ್ರತಿಭೆ ಅಡಗಿರುತ್ತದೆ. ಅವಕಾಶ ಇರುವಲ್ಲಿ ಅದನ್ನು ಬಳಸಿಕೊಂಡು ಪ್ರತಿಭೆಯನ್ನು ಹೊರ ಹಾಕಬೇಕು. ವಿದ್ಯಾರ್ಥಿ ಪರಿಷತ್ತಿನ ಮುಖಾಂತರ ನಾಯಕತ್ವ ಗುಣವನ್ನು ಬಾಲ್ಯದಲ್ಲಿಯೇ...
ಉಡುಪಿ

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇದರ ವತಿಯಿಂದ ಬೈಂದೂರು ಯೆಡ್ತರೆ ಜೆ.ಎಸ್.ಆರ್ ಸಭಾಂಗಣದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲೆಯ 350 ಶಾಲೆಗಳ ವಿದ್ಯಾರ್ಥಿಗಳಿಗೆ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಸಮಾರಂಭದಲ್ಲಿ ಸಂಸ್ಥೆಯ ಪ್ರವರ್ತಕರಾದ ಡಾ. ಎಚ್. ಎಸ್. ಶೆಟ್ಟಿ, ಕರ್ನಾಟಕ...
ಉಡುಪಿಬೈಂದೂರುಸುದ್ದಿ

ನೆರೆ ಪೀಡಿತ ಪ್ರದೇಶಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ : ಅಗತ್ಯ ಮೂಲಸೌಕರ್ಯ, ತುರ್ತು ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ- ಕಹಳೆ ನ್ಯೂಸ್

ಬೈಂದೂರು: ನಿರಂತರ ಮಳೆಯಿಂದಾಗಿ ಕ್ಷೇತ್ರದ ಕೆಲವು ಭಾಗದಲ್ಲಿ ನೆರೆ ಆವರಿಸಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೆಂಗಳೂರಿನಲ್ಲಿ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಹಠತ್ ರದ್ದುಗೊಳಿಸಿ ನೇರವಾಗಿ ಕ್ಷೇತ್ರಕ್ಕೆ ಆಗಮಿಸಿ, ಶುಕ್ರವಾರ ಬೆಳಗ್ಗೆಯಿಂದ ನೆರೆಪೀಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರು ಸೇರಿದಂತೆ ನೆರೆಹಾನಿಗೆ ಒಳಗಾದವರೊಂದಿಗೆ ಮಾತುಕತೆ ನಡೆಸಿದರು. ನಾವುಂದ ಭಾಗದ ಸಾಲ್ಬುಡ, ನಾಡಾ ಗ್ರಾಮದ ಚಿಕ್ಕಳ್ಳಿ, ಸಂಸಾಡಿ, ಹೆಮ್ಮುಂಜಿ, ಕೊಂಣ್ಕೀ ಪ್ರದೇಶಗಳಲ್ಲಿ ಮಳೆಯಿಂದಾಗಿ ನೆರೆ, ಪ್ರವಾಹ, ಗುಡ್ಡೆ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ; ಕರಾವಳಿಗೆ 2 ದಿನ ರೆಡ್‌ ಅಲರ್ಟ್..! – ಕಹಳೆ ನ್ಯೂಸ್

ಬೆಂಗಳೂರು :- ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಗೆ 2 ದಿನ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇನ್ನೂ ಹೆಚ್ಚಾಗಿದೆ. ಜುಲೈ 6 ಮತ್ತು ಜುಲೈ 7 ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ,...
1 22 23 24 25 26 85
Page 24 of 85