ಜೂ.29ರ0ದು ದಿನೇಶ ಉಪ್ಪೂರ ವಿರಚಿತ “ದೊಡ್ಡ ಸಾಮಗರ ನಾಲ್ಮೊಗ” ಗ್ರಂಥ ಲೋಕಾರ್ಪಣೆ- ಕಹಳೆ ನ್ಯೂಸ್
ಸ್ವಾತಂತ್ರ್ಯ ಹೋರಾಟಗಾರರಾಗಿ, ಹರಿದಾಸರಾಗಿ, ಯಕ್ಷಗಾನದ ನವಯುಗದ ಪ್ರವರ್ತಕರಾದ ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಚಿತ್ರಿಸುವ, ದಿನೇಶ ಉಪ್ಪೂರ ವಿರಚಿತ, “ದೊಡ್ಡ ಸಾಮಗರ ನಾಲ್ಮೊಗ” ಗ್ರಂಥ ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಗ್ರಹದಲ್ಲಿ ಜೂನ್ 29 ನೇ ಶನಿವಾರ ಮಧ್ಯಾಹ್ನ 3 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಕಾಸರಗೋಡಿನ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಪುಸ್ತಕವನ್ನು ಅನಾವರಣಗೊಳಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲದ ಮಾಹೆಯ ಸಹಕುಲಾಧಿಪತಿಗಳಾದ ಡಾ....