ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಒಪ್ಪಿಗೆ: ಕೋಟ-ಕಹಳೆ ನ್ಯೂಸ್
ಕುಂದಾಪುರ : ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನ ಮಾಡುವ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಗಳಾಗಿದ್ದು, ಇದಕ್ಕೆ ಕರ್ನಾಟಕ ಸರಕಾರ ಭಾಗಶಃ ಒಪ್ಪಿಗೆ ನೀಡಿದೆ. ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನವಾದಲ್ಲಿ ಪರಿಪೂರ್ಣ ಅಭಿವೃದ್ದಿಗೆ ಅನುಕೂಲ ವಾಗುತ್ತದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕುಂದಾಪುರದ ಮೂಡ್ಲಕಟ್ಟೆ ರೈಲ್ವೆ ನಿಲ್ದಾಣದಲ್ಲಿ ಪ್ರಥಮವಾಗಿ ನಿಲುಗಡೆ ಗೊಂಡ ತಿರುವನಂತಪುರಂ ನಿಝಾಮುದ್ದೀನ್ ಎಕ್ಸ್‌ಪ್ರೆಸ್ ಮತ್ತು ಎರ್ನಾಕುಲಂ ನಿಜಾಮುದ್ಧಿನ್ ಎಕ್ಸ್‌ಪ್ರೆಸ್ ರೈಲುಗಳನ್ನು ಸ್ವಾಗತಿಸಿದ...