Saturday, January 25, 2025

ಉಡುಪಿ

ಉಡುಪಿಕಾಪುಸುದ್ದಿ

ಉಡುಪಿ :ಕಡಲ್ಕೊರೆತ ತಡೆಗೆ ಮುಂಜಾಗ್ರತಾ ಕ್ರಮವಹಿಸಲು ತಹಶಿಲ್ದಾರ್ ಪ್ರತಿಭಾ ಭೇಟಿ-ಕಹಳೆ ನ್ಯೂಸ್

ಉಡುಪಿ : ಪ್ರತಿ ವರ್ಷ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಳೂರಿನ ತೊಟ್ಟಂ ಪ್ರದೇಶ ಕಡಲ್ಕೊರೆತ ಉಂಟಾಗುವ ಪ್ರದೇಶವಾಗಿದ್ದು, ಹಲವಾರು ತೆಂಗಿನಮರಗಳು ಬಲಿಯಾಗುತ್ತಿವೆ ಆಸ್ತಿ ಪಾಸ್ತಿ ಹಾನಿ ಹಾಗೂ ಜನಜೀವನ ಅಸ್ತವ್ಯಸ್ತತೆಗೆ ಕಾರಣವಾಗುತ್ತದೆ. ಈ ಪ್ರದೇಶಕ್ಕೆ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಪರಿಶೀಲಿಸಿದರು. ತಡೆಗೋಡೆ ನಿರ್ಮಿಸಲು ಮತ್ತು ಜಾರುತ್ತಿರುವ ಬ್ರೇಕ್ ವಾಟರ್ ಕಲ್ಲುಗಳನ್ನು ವ್ಯವಸ್ಥಿತಗೊಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯ...
ಉಡುಪಿಕ್ರೈಮ್ರಾಜಕೀಯರಾಜ್ಯಸುದ್ದಿ

ಮಾಜಿ ಶಾಸಕ ಕೆ.ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ : ಅತುಲ್ ಖುಲಾಸೆ – ಕಹಳೆ ನ್ಯೂಸ್

ಉಡುಪಿ : 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದ ಆರೋಪಿ ಅತುಲ್ ‌ರಾವ್ ನನ್ನು ಉಡುಪಿ ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ಆದೇಶ ನೀಡಿದೆ. 2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ...
ಉಡುಪಿಸುದ್ದಿ

ಸಂತೆಕಟ್ಟೆಯಲ್ಲಿ ಉರುಳಿ ಬಿದ್ದ ಆಯಿಲ್ ಟ್ಯಾಂಕರ್ – ಕಹಳೆ ನ್ಯೂಸ್

ಉಡುಪಿ : ರಾಷ್ಟ್ರೀಯ ಹೆದ್ದಾರಿ ಸಂತೆಕಟ್ಟೆ ಬಳಿ ಟ್ಯಾಂಕ‌ರ್ ಒಂದು ಮಗುಚಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಬೃಹತ್ ಗಾತ್ರದ ಹೊಂಡವನ್ನು ಸ್ಥಳದಲ್ಲಿ ನಿರ್ಮಿಸಲಾಗಿದೆ. ಇದರೊಳಗೆ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಉರುಳಿ ಬಿದ್ದಿದೆ. ವಿಳಂಬ ಕಾಮಗಾರಿಯಿಂದಾಗಿ ಈ ಹೆದ್ದಾರಿಯಲ್ಲಿ ಸಂಚಾರಿಸುವ ವಾಹನ ಸವಾರರು ದಿನನಿತ್ಯ ಹೆದ್ದಾರಿ ಇಲಾಖೆಗೆ, ಜನಪ್ರತಿನಿಧಿಗಳಿಗೆ, ಜಿಲ್ಲಾಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ....
ಉಡುಪಿಸುದ್ದಿ

ಉಡುಪಿ : ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಗೂಡ್ಸ್ ಲಾರಿ : ಲಾರಿ ಚಾಲಕ ಗಂಭೀರ – ಕಹಳೆ ನ್ಯೂಸ್

ಉಡುಪಿ : ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಗೂಡ್ಸ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಉದ್ಯಾವರದಲ್ಲಿ ನಡೆದಿದೆ. ತಾಂತ್ರಿಕ ಸಮಸ್ಯೆಯಿಂದ ರಾಷ್ಟ್ರೀಯ ಹೆದ್ದಾರಿ ನಡುವೆಯೇ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಮತ್ತೊಂದು ಗೂಡ್ಸ್ ಲಾರಿ ಚಾಲಕ ಗಮನಿಸದೇ ಎದುರಿನಲ್ಲಿ ಇದ್ದ ಲಾರಿಗೆ ಢಿಕ್ಕಿ ಹೊಡೆದಿದ್ದಾನೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಕಾಫು ಪೆÇೀಲಿಸ್ ಠಾಣೆಯಲ್ಲಿ...
ಉಡುಪಿಸುದ್ದಿ

ಜಿಲ್ಲೆಯಲ್ಲಿ MO4 ತಳಿಯ ಭತ್ತದ ಬಿತ್ತನೆ ಬೀಜ ಪೂರೈಕೆಗೆ ಕೃಷಿ ಸಚಿವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ – ಕಹಳೆ ನ್ಯೂಸ್

ಉಡುಪಿ ಜಿಲ್ಲೆಯಾದ್ಯಂತ ಕೃಷಿ ಇಲಾಖೆಯಲ್ಲಿ MO4 ತಳಿಯ ಭತ್ತದ ಬಿತ್ತನೆ ಬೀಜದ ಕೊರತೆಯಿಂದ ಜಿಲ್ಲೆಯ ಕೃಷಿಕರು ಕೃಷಿ ಚಟುವಟಿಕೆ ಆರಂಭಿಸಲು ಸಮಸ್ಯೆ ಎದುರಿಸುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಜಿಲ್ಲೆಗೆ ಅಗತ್ಯ ಪ್ರಮಾಣದ ಬೀಜವನ್ನು ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕೃಷಿ ಸಚಿವ ಚೆಲುವರಾಯ ಸ್ವಾಮಿಯವರಿಗೆ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಸುಮಾರು 38,500 ಹೆಕ್ಟೇರ್ ಪ್ರದೇಶದಲ್ಲಿ ಭತ್ತವನ್ನು ಬೆಳೆಯುತ್ತಿದ್ದು, ಭತ್ತದ ಬಿತ್ತನೆ ಬೀಜದ ಕೊರತೆಯಿಂದ ಮುಂಗಾರು ಪೂರ್ವಭಾವಿ ಕೃಷಿ ಸಿದ್ಧತೆಗೆ...
ಉಡುಪಿಶಿಕ್ಷಣಸುದ್ದಿ

ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ಜೂ.7ರಿಂದ 9ರವರೆಗೆ 8ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆ –ಕಹಳೆ ನ್ಯೂಸ್

ಉಡುಪಿ : ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ವಕೀಲ ಪಿ. ಶಿವಾಜಿ ಶೆಟ್ಟಿ ಸ್ಮಾರಕ 8ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಜೂನ್ 7ರಿಂದ 9ರವರೆಗೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿರ್ಮಲ ಕುಮಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ ಕಾನೂನು ಕಾಲೇಜುಗಳ 18 ತಂಡಗಳು ಭಾಗವಹಿಸಲಿವೆ. ಜೂನ್ 7ರಂದು ಸಂಜೆ 5 ಗಂಟೆಗೆ ಕರ್ನಾಟಕ...
ಉಡುಪಿದಕ್ಷಿಣ ಕನ್ನಡಸುದ್ದಿ

ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ವತಿಯಿಂದ ಕೋಡಮಾಡಿದ ಉಚಿತ ಬರವಣಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಇಂದು ದಿನಾಂಕ 06-06-2024 ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಾದ ಗೋವಿಂದ ಶೆಟ್ಟಿ, ಮುಖ್ಯ ಶಿಕ್ಷಕರಾದ ಫ್ರಾನ್ಸಿಸ್ ಮೆನೇಜಸ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಭೋಜರಾಜ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಯಶೋಧ ಹಾಗೂ ಸಹ ಶಿಕ್ಷಕರು, ಸಿಬ್ಬಂದಿ...
ಉಡುಪಿದಕ್ಷಿಣ ಕನ್ನಡಸುದ್ದಿ

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ – 2024 ಸುಮಿತ್ ಮೇತ್ರಿ ಹಾಗೂ ಜಯಶ್ರೀ ಕದ್ರಿ ಆಯ್ಕೆ –ಕಹಳೆ ನ್ಯೂಸ್

ಉಡುಪಿ: ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ದಿ| ಕುರಾಡಿ ಸೀತಾರಾಮ ಅಡಿಗರ ನೆನಪಿನ 'ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ' ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಸಂಸ್ಥೆಯು 2023ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನಗಳನ್ನು ಆಹ್ವಾನಿಸಿತ್ತು. ವಿಜಯಪುರದ ಸುಮಿತ್ ಮೇತ್ರಿಯವರ 'ಈ ಕಣ್ಣುಗಳಿಗೆ ಸದಾ ನೀರಡಿಕೆ' ಹಾಗೂ ಮಂಗಳೂರಿನ ಜಯಶ್ರೀ ಬಿ. ಕದ್ರಿ 'ಕೇಳಿಸದ ಸದ್ದುಗಳು' ಕೃತಿಗಳು ಆಯ್ಕೆಯಾಗಿರುತ್ತವೆ ಎಂದು...
1 29 30 31 32 33 85
Page 31 of 85