ಕರಾವಳಿಯಲ್ಲಿ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭ : ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಮುನ್ನಡೆ – ಕಹಳೆ ನ್ಯೂಸ್
ಉಡುಪಿ/ ಮಂಗಳೂರು : ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಮೊದಲಿಗೆ ನಡೆಯುತ್ತಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಫಲಿತಾಂಶದ ಕುರಿತು ಅಂದಾಜು ಅಂಕಿ-ಅಂಶಗಳು ಬಹಿರಂಗವಾಗಲಿದೆ. ಲೋಕಸಭೆ ಚುನಾವಣೆಗೆ ಅಂಚೆ ಮತಪತ್ರಗಳು ಮತ್ತು ಇವಿಎಂಗಳನ್ನು ಹೊಂದಿರುವ ಸ್ಟ್ರಾಂಗ್ ರೂಂಗಳನ್ನು ಚುನಾವಣಾ ವೀಕ್ಷಕರು, ಅಭ್ಯರ್ಥಿಗಳ ಚುನಾವಣಾ ಏಜೆಂಟರು ಮತ್ತು ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಗಿದೆ. ರಾಜ್ಯದ ದಕ್ಷಿಣ ಕನ್ನಡ ಕ್ಷೇತ್ರ ಹಾಗೂ ಉಡುಪಿ - ಚಿಕ್ಕಮಗಳೂರು...