Monday, January 27, 2025

ಉಡುಪಿ

ಉಡುಪಿಕಾರ್ಕಳದಕ್ಷಿಣ ಕನ್ನಡರಾಜ್ಯಸುದ್ದಿ

ಉಡುಪಿ ಗ್ಯಾಂಗ್ ವಾರ್ ಪ್ರಕರಣ : “ಸಣ್ಣ ಕಾರಣಕ್ಕೆ ಶಾಸಕರನ್ನು ಬಂದಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂದಿಸುವ ಗಂಡೆದೆ ಇಲ್ಲವೇ?” ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ಶಾಸಕ ವಿ. ಸುನಿಲ್ ಕುಮಾರ್ – ಕಹಳೆ ನ್ಯೂಸ್

ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ. ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯ

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ; ಬಿಜೆಪಿಯಿಂದ ಸಾಮರಸ್ಯಕ್ಕೆ..!!! – ಕಹಳೆ ‌ನ್ಯೂಸ್

ಉಡುಪಿ : ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ಮಾಡಿ RSs ಘೋಷಣೆ ಮಾಡಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕುಂತೂರಿನವರಾದ ರಾಜೇಶ್ ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜವಾಬ್ದಾರಿ ವಹಿಸಿಕೊಂಡು‌, ತಮ್ಮನ್ನು ತೊಡಗಿಸಿಕೊಂಡವರು ಅನೇಕ ಜಿಲ್ಲೆ, ವಿಭಾಗಗಳಲ್ಲಿ  ಹಾಗೂ ಪ್ರಾಂತದ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದು, ನಿನ್ನೆ ಹೆಬ್ರಿಯಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ವರ್ಗದಲ್ಲಿ ಅನೇಕರ ಜವಾಬ್ದಾರಿಗಳು ಬದಲಾವಣೆಯಾಗಿದ್ದು, ಅದರಂತೆ ರಾಜೇಶ್ ಅವರನ್ನು ಬದಲಾವಣೆ ಮಾಡಿದೆ....
ಉಡುಪಿಸುದ್ದಿ

ಡಾ! ವಿ.ಎಸ್. ಆಚಾರ್ಯ ನಿವಾಸಕ್ಕೆ ಭೇಟಿ ನೀಡಿ ಶಾಂತ ವಿ. ಆಚಾರ್ಯ ಅವರ ಆಶೀರ್ವಾದ ಪಡೆದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ– ಕಹಳೆ ನ್ಯೂಸ್

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ.ಎಸ್. ಆಚಾರ್ಯರವರ ಮನೆಗೆ ಭೇಟಿ ನೀಡಿ, ಡಾ! ವಿ.ಎಸ್. ಆಚಾರ್ಯರವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಡಾ! ಆಚಾರ್ಯರವರ ಧರ್ಮಪತ್ನಿ ಶಾಂತ ವಿ. ಆಚಾರ್ಯರವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ....
ಉಡುಪಿಸುದ್ದಿ

ಮಣಿಪಾಲ ರಜತಾದ್ರಿ ಬಳಿ ಡಾ! ವಿ.ಎಸ್. ಆಚಾರ್ಯ ಪ್ರತಿಮೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಗೌರವಾರ್ಪಣೆ– ಕಹಳೆ ನ್ಯೂಸ್

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಮಣಿಪಾಲದ ರಜತಾದ್ರಿ ಬಳಿ ಇರುವ ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ.ಎಸ್. ಆಚಾರ್ಯರವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ...
ಉಡುಪಿದಕ್ಷಿಣ ಕನ್ನಡಸುದ್ದಿ

ಸಹಕಾರಿ ಕ್ಷೇತ್ರದ ವಿಶಿಷ್ಟ ಸಾಧನೆಗಾಗಿ ಯಶ್ ಪಾಲ್ ಸುವರ್ಣ ರವರಿಗೆ ಭಾರತ್ ರತ್ನ ಸಹಕಾರಿತ ಸನ್ಮಾನ್ ಬೆಸ್ಟ್ ಯಂಗ್ ಲೀಡರ್ 2024 ಪ್ರಶಸ್ತಿ ಪ್ರದಾನ-ಕಹಳೆ ನ್ಯೂಸ್

ಉಡುಪಿ :ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಮಹಾಮಂಡಳ ವತಿಯಿಂದ ಮುಂಬೈನಲ್ಲಿ ಆಯೋಜಿಸಿದ್ದ ಭಾರತ್ ಕೋ ಆಪರೇಟಿವ್ ಬ್ಯಾಂಕಿAಗ್ ಸಮ್ಮಿಟ್ 2024 ಸಮಾರಂಭದಲ್ಲಿ ಸಹಕಾರ ಕ್ಷೇತ್ರದ ವಿಶಿಷ್ಟ ಸಾಧನೆಯನ್ನು ಪರಿಗಣಿಸಿ ನೀಡುವ ರಾಷ್ಟ್ರ ಮಟ್ಟದ ಪ್ರತಿಷ್ಟಿತ ಭಾರತ್ ರತ್ನ ಸಹಕಾರಿತ ಸನ್ಮಾನ್ 2024 ಬೆಸ್ಟ್ ಯಂಗ್ ಲೀಡರ್ ಪ್ರಶಸ್ತಿಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಸ್ವೀಕರಿಸಿದರು. ಕರಾವಳಿ ಕರ್ನಾಟಕದ ಪ್ರತಿಷ್ಠಿತ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ...
ಉಡುಪಿಸುದ್ದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕರೆ: ಪಕ್ಷ ವಿರೋಧಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ-ಕಹಳೆ ನ್ಯೂಸ್

ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ! ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯಾಗಿ ಎಸ್.ಎಲ್. ಭೋಜೇಗೌಡ ಅವರು ಚುನಾವಣಾ ಕಣದಲ್ಲಿದ್ದಾರೆ. ಪಕ್ಷದ ಪರಂಪರೆಯಂತೆ ಈ ಬಾರಿಯೂ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಶಿವಮೊಗ್ಗ ಭಾಗದ ಅಭ್ಯರ್ಥಿಯನ್ನು ಪಕ್ಷ ಆಯ್ಕೆ ಮಾಡಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಕಾರಣಕ್ಕೆ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎನ್.ಡಿ.ಎ ಅಭ್ಯರ್ಥಿಯ ಸ್ಪರ್ಧೆಗೆ ಪಕ್ಷ ಅವಕಾಶ ನೀಡಿದೆ....
ಉಡುಪಿದಕ್ಷಿಣ ಕನ್ನಡಸುದ್ದಿ

ಉಡುಪಿ :ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ಪೊಲೀಸ್ ದೌರ್ಜನ್ಯ ಆರೋಪ; ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ-ಕಹಳೆ ನ್ಯೂಸ್

ಉಡುಪಿ : ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೃಥ್ವಿರಾಜ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆಅಜ್ಜರ ಕಾಡು ಹುತಾತ್ಮ ಸ್ಮಾರಕ ಸಮ್ಮುಖದಲ್ಲಿ ಪ್ರತಿಭಟನೆಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಿದೆ. ದುರುದ್ದೇಶದಿಂದ ಎಫ್ಐಆರ್ ದಾಖಲಿಸಿ ಬಂಧನಕ್ಕೆ ಪ್ರಯತ್ನಿಸಿದ್ದಾರೆ ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಗೂ ಯುವ ಮೋರ್ಚಾ ನಾಯಕ ಶಶಿಧರ್ ಶೆಟ್ಟಿಗೂ ಯಾವುದೇ ಸಂಬAಧ ಇಲ್ಲ ಅನಗತ್ಯವಾಗಿ ಕೇಸು ದಾಖಲಿಸಿ ಕಾರ್ಯಕರ್ತರನ್ನು ಬಂಧನ ಮಾಡಿದ್ದಾರೆ. ಇಡೀ ರಾಜ್ಯ ಈ ಹೈಡ್ರಾಮವನ್ನು ನೋಡಿದೆ ಕಾರ್ಯಕರ್ತರನ್ನು ರಕ್ಷಿಸುವ ಶಾಸಕರ ಕಥೆ...
ಉಡುಪಿಸುದ್ದಿ

ಉಡುಪಿ :24 ಗಂಟೆಯೊಳಗೆ ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ : ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಎಚ್ಚರಿಕೆ- ಕಹಳೆ ನ್ಯೂಸ್

ಉಡುಪಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು. ಇಲ್ಲದಿದ್ದರೆ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 24 ಗಂಟೆಯೊಳಗೆ ಸ್ಪರ್ಧೆಗೆ ನಿವೃತ್ತಿ ಘೋಷಿಸದಿದ್ದರೆ, ಪಕ್ಷ ವಿರೋಧಿ ಚಟುವಟಿಕೆ...
1 34 35 36 37 38 86
Page 36 of 86