ಎ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ– ಕಹಳೆ ನ್ಯೂಸ್
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು 1997ರಲ್ಲಿ ಉಡುಪಿ ಪ್ರತ್ಯೇಕ ಜಿಲ್ಲೆಯಾಗಿ ರಚನೆಗೊಂಡ ಬಳಿಕ...