ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಿಜಕ್ಕೂ ಆಗಿದ್ದೇನು? ಪ್ರತಿಭಟನೆಯಲ್ಲಿ ಕೆಲ ಅಂಶಗಳನ್ನು ಬಿಚ್ಚಿಟ್ಟ ವಿದ್ಯಾರ್ಥಿನಿ -ಕಹಳೆ ನ್ಯೂಸ್
ಉಡುಪಿ : ಉಡುಪಿಯ ಖಾಸಗಿ ನರ್ಸಿಂಗ್ ಕಾಲೇಜಿನ ಶೌಚಾಲಯದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು, ಹಿಂದು ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಿಸಿರುವ ಬಗ್ಗೆ ಪ್ರಕರಣ ದಾಖಲಾದ ಬೆನ್ನಲ್ಲೆ ಎಬಿವಿಪಿ ಗುರುವಾರ ನಗರದ ಅಜ್ಜರಕಾಡು ಹುತಾತ್ಮ ಸ್ಮಾರಕ ಭವನದ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿ, ಆರಂಭದಲ್ಲಿ ಪ್ರಕರಣದ ದಿಕ್ಕು ತಪ್ಪಿಸಿದ ಮಲ್ಪೆ ವೃತ್ತನೀರಿಕ್ಷಕರನ್ನು ಅಮಾನತುಗೊಳಿಸಿ, ತನಿಖಾಧಿಕಾರಿಯನ್ನು ಬದಲಾಯಿಸಬೇಕೆಂದು ಆಗ್ರಹಿಸಿದರು. ಗುರುವಾರ ಬೆಳಗ್ಗೆಯೇ ನೂರಾರು ವಿದ್ಯಾರ್ಥಿಗಳು ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೇ ಪೋಲಿಸ್ ವಿಳಂಬ ನೀತಿ, ರಾಜ್ಯ...