ಅಪ್ರಾಪ್ತರಿಗೆ ವಸತಿಗೃಹ ಕೊಠಡಿ ನೀಡಿದಲ್ಲಿ ಪರವಾನಿಗೆ ರದ್ದು – ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧ್ಯಕ್ಷ ಕೂರ್ಮಾರಾವ್ ಎಂ. ಖಡಕ್ ಎಚ್ಚರಿಕೆ – ಕಹಳೆ ನ್ಯೂಸ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಬಾಲ ನ್ಯಾಯ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯನ್ವಯ ಸೂಕ್ತ ಕಾನೂನು ಕ್ರಮ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಪ್ರಾಪ್ತ ಮಕ್ಕಳಿಗೆ ಕೊಠಡಿ ನೀಡಬಾರದು. ಜಿಲ್ಲೆಯ ನೋಂದಾಯಿತ ಎಲ್ಲಾ ವಸತಿಗೃಹಗಳಲ್ಲಿ ಕೊಠಡಿ ಒದಗಿಸುವ ಸಂದರ್ಭದಲ್ಲಿ ಅಪ್ರಾಪ್ತ ಮಕ್ಕಳಿಗೆ ಸಂಬAಧಿಸಿದ ದಾಖಲೆ ಪರಿಶೀಲಿಸಿಯೇ ಕೊಠಡಿ ಒದಗಿಸಬೇಕು. ಒಂದು ವೇಳೆ ದಾಖಲೆ ಪಡೆಯದೇ ಅಥವಾ ಪರಿಶೀಲಿಸದೇ ವಸತಿಗೃಹಗಳ ಕೊಠಡಿಗಳನ್ನು ಒದಗಿಸಿದ್ದಲ್ಲಿ ಅಂಥ ವಸತಿಗೃಹಗಳ ಪರವಾನಿಗೆ ರದ್ದುಪಡಿಸಲಾಗುವುದು ಎಂದು...