ಉಡುಪಿ: ಹೆದ್ದಾರಿಯಲ್ಲಿ ಅಪಘಾತದಿಂದ ಸಾವು ಸಂಭವಿಸಿದರೆ ಅಧಿಕಾರಿಗಳ ಮೇಲೆ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್ – ಕಹಳೆ ನ್ಯೂಸ್
ಉಡುಪಿ: ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯ ಕಾರಣ ಅಪಘಾತಗಳು ಸಂಭವಿಸಿ, ಸಾವು ನೋವುಗಳಾದಲ್ಲಿ ಸಂಬಂಧಪಟ್ಟ ಹೆದ್ದಾರಿ ಅಧಿಕಾರಿಗಳ ಮೇಲೆ ಕೇಸು ದಾಖಲಿಸುವಂತೆ ಪೆÇಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169 ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಮೂಲಭೂತ ಸಮಸ್ಯೆಗಳನ್ನು...