ಉಡುಪಿಯ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್
ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪಡೆದ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಸನ್ಮಾನ ಪುರಸ್ಕೃತ ಹಿರಿಯ ಪತ್ರಕರ್ತ ಪ್ರಭಾಕರ ಆಚಾರ್ಯ ಚಿತ್ತೂರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ...