ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದಾಗ ಕಲ್ಲೆಸೆದ ಕೀಡಿಕೇಡಿಯನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು-ಕಹಳೆ ನ್ಯೂಸ್
ಉಡುಪಿ : ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದ ವೇಳೆ ಕಟ್ಟಡದ ಮೇಲೆ ನಿಂತು ವ್ಯಕ್ತಿಯೊಬ್ಬ ಪೊಲೀಸರ ವಾಹನಕ್ಕೆ ಕಲ್ಲೆಸೆದು ಗಲಭೆ ಉಂಟುಮಾಡಲು ಯತ್ನಿಸಿದ ಘಟನೆ ಸಂಭವಿಸಿದೆ. ವ್ಯಕ್ತಿಯನ್ನು ಸ್ಥಳದಲ್ಲೇ ಇದ್ದ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಮ್ಮದ್ ಹಫೀಜ್ ಎಂದು ಗುರುತಿಸಲಾಗಿದೆ. ಕೊರಗಜ್ಜನ ಕೋಲ ನಡೆಯುತ್ತಿದ್ದಾಗ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದು, ಈ ವೇಳೆ ಗಲಭೆ ಸೃಷ್ಟಿಸಲು ಪ್ರಯತ್ನಿಸಿರುವ ಹಫೀಜ್, ಕಟ್ಟಡದ ಮೇಲಿನಿಂದ ಕಲ್ಲೊಂದನ್ನು...