Tuesday, April 15, 2025

ಚಿಕ್ಕಮಂಗಳೂರು

ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಎಪ್ರಿಲ್ 19 ರಿಂದ 23 ರ ತನಕ ಸಂಸೆ ಭಗವಾನ್ 1008 ಪಾಶ್ವನಾಥ ಸ್ವಾಮಿ ಬಸದಿ ಕಾರ್ಮಣ್ಣು ಸಂಸೆ ಯಲ್ಲಿ ಪಂಚಕಲ್ಯಾಣ ಪೂರ್ವಕ ನೂತನ ಜಿನ ಬಿಂಬ ಪ್ರತಿಷ್ಠಾ ಮಹೋತ್ಸವ-ಕಹಳೆ ನ್ಯೂಸ್

ಕಳಸ : ಸಂಸೆ ಭಗವಾನ್ 1008 ಪಾಶ್ವನಾಥ ಸ್ವಾಮಿ ಬಸದಿ ಕಾರ್ಮಣ್ಣು ಸಂಸೆ ಯಲ್ಲಿ ಎಪ್ರಿಲ್ 19 ರಿಂದ 23 ರ ತನಕ ಪಂಚಕಲ್ಯಾಣ ಪೂರ್ವಕ ನೂತನ ಜಿನ ಬಿಂಬ ಪ್ರತಿಷ್ಠಾ ಮಹೋತ್ಸವವು ಜರುಗಲಿದ್ದು. ನೂತನ ಜಿನ ಬಿಂಬ ಗಳನ್ನು ಮಂಗಳವಾರ ( 2-4-25) ಸಂಸೆ ಶ್ರೀ ಪದ್ಮಾವತಿ , ವರಮಹಾಲಕ್ಷ್ಮಿ ಅಮ್ಮನವರ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಮೆರವಣಿಗೆಯ ಮೂಲಕ ಕಾರ್ಮಣ್ಣು ದೇವಸ್ಥಾನ ಕ್ಕೆ ಪುರ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕಾಫಿನಾಡಿನಲ್ಲಿ ಗಾಳಿ – ಮಳೆ ಅಬ್ಬರ. ಧರೆಗುರುಳಿದ ಮರ ;ರಸ್ತೆ ಬಂದ್-ಕಹಳೆ ನ್ಯೂಸ್

ಚಿಕ್ಕಮಗಳೂರು: ಮಲೆನಾಡಿನಲ್ಲಿ ಗಾಳಿ ಮಳೆಯ ಅಬ್ಬರ ಜೋರಾಗಿದ್ದು ಪರಿಣಾಮ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ರಸ್ತೆ ಸಂಚಾರ ತಾತ್ಕಾಲಿಕ ಬಂದ್ ಆಗಿದೆ. ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ ಭಾರೀ ಗಾಳಿ-ಮಳೆಯಿಂದಾಗಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಕಳಸದಿಂದ ಮೂಡಿಗೆರೆ ಹೋಗುವ ಮಾರ್ಗ ತಾತ್ಕಾಲಿಕ ಬಂದ್ ಆಗಿದ್ದು ಕೂಡಲೇ ಸ್ಥಳೀಯರು ಮರ ತೆರವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ. ಕಳಸ ತಾಲೂಕಿನ ಹಿರೇಬೈಲ್-ಮರಸಣಿಗೆ ಬಳಿ ಘಟನೆ ನಡೆದಿದ್ದು ಇಲ್ಲಿನ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ತುಂಗಾ ನದಿ ತೀರದಲ್ಲಿ ನಡೆಯುತ್ತಿದೆ ಅಕ್ರಮ ಮರಳು ದಂಧೆ. DYSP, PSI ಭೇಟಿ ಪರಿಶೀಲನೆ-ಕಹಳೆ ನ್ಯೂಸ್

ಚಿಕ್ಕಮಗಳೂರು: ಅಕ್ರಮ ಮರಳು ದಂಧೆ ನಡೆಯುತ್ತಿರುವ ಘಟನೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ತುಂಗಾ ನದಿ ತಟದಲ್ಲಿ ನಡೆದಿರುವುದು ಬೆಳಕಿಗೆ ಬಂದಿದ್ದು ವಿಚಾರ ಗೊತ್ತುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ, ಪಿಎಸ್‌ಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾತ್ರಿ ವೇಳೆ ಮಾತ್ರ ಕಾರ್ಯಾಚರಣೆಗಿಳಿಯಲಿರೋ ದಂಧೆಕೋರರು, ನಿತ್ಯ ಲಾರಿ, ಟಿಪ್ಪರ್, ಟ್ರ್ಯಾಕ್ಟರ್ ನಲ್ಲಿ ಹತ್ತಾರು ಲೋಡ್ ಅಮರಳನ್ನು ಸಾಗಾಟ ಮಾಡಿ ಸರ್ಕಾರಿ ಜಾಗದಲ್ಲಿ ಶೇಖರಿಸಿ ಬಳಿಕ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮಾಹಿತಿಗೆ ಸ್ಥಳೀಯರ...
ಚಿಕ್ಕಮಂಗಳೂರುಸುದ್ದಿ

ರಸ್ತೆ ಅಪಘಾತ : ಬೈಕ್ ಸವಾರನಿಗೆ ಗಂಭೀರ ಗಾಯ- ಕಹಳೆ ನ್ಯೂಸ್ 

ಮೂಡಿಗೆರೆ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್‌ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಲ್ಗುಣಿ ಬಳಿ ಮಂಗಳವಾರ(ಫೆ.18) ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಹಾಗೂ ಮೂಡಿಗೆರೆ ಕಡೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಸುಜೀತ್ ಎಂಬವರ ತಲೆ ಹಾಗೂ ಕೈ ಕಾಲಿಗೆ ತೀವ್ರ ಪೆಟ್ಟಾಗಿದ್ದು ಕೂಡಲೇ ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಬಣಕಲ್...
ಆರೋಗ್ಯಚಿಕ್ಕಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿದೆ ಮಂಗನ ಕಾಯಿಲೆ : 7 ಜನರಲ್ಲಿ ಸೋಂಕು ದೃಢ-ಕಹಳೆ ನ್ಯೂಸ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ (ಕೆ ಎಫ್ ಡಿ) ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ 7 ಜನರು ಮಹಾಮಾರಿ ಮಂಗನ ಕಾಯಿಲೆಯಿಂದ ಬಳಲುತ್ತಿದ್ದಾರೆ. ಚಿಕ್ಕಮಗಳೂರಿನ ಖಂಡ್ಯಾ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಕೆ ಎಫ್ ಡಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ 7 ಜನರಲ್ಲಿ ಸೋಂಕು ಪತ್ತೆಯಾಗಿದೆ. ಎನ್ ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂವರಲ್ಲಿ ಸೋಂಕು ಪತ್ತೆಯಾಗಿದೆ....
ಚಿಕ್ಕಮಂಗಳೂರುಸುದ್ದಿ

ಶರಣಾಗತ 6 ನಕ್ಸಲರ ಶಸ್ತ್ರಾಸ್ತ್ರ ಮೇಗೂರು ಅರಣ್ಯದಲ್ಲಿ ಪತ್ತೆ : ಶೋಧ ನಡೆಸಿ ಪತ್ತೆ ಹಚ್ಚಿ ವಶಪಡಿಸಿಕೊಂಡ ಪೊಲೀಸರು–ಕಹಳೆ ನ್ಯೂಸ್ 

ಬೆಂಗಳೂರು: ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳು ಕೊಪ್ಪ ಸಮೀಪ ಮೇಗೂರು ಅರಣ್ಯದಲ್ಲಿ ಪತ್ತೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ ಜಿ ಪರಮೇಶ್ವರ ಅವರ ಎದುರು ಶರಣಾಗಿದ್ದ ಮುಂಡಗಾರು ಲತಾ ನೇತೃತ್ವದ ಆರು ನಕ್ಸಲರ ತಂಡ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿರಲಿಲ್ಲ. ಹೀಗಾಗಿ ಕೊಪ್ಪ ಪೊಲೀಸ್ ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸಿ ಮೇಗೂರು ಅರಣ್ಯ ಭಾಗದಲ್ಲಿ ಅಡಗಿಸಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಪ್ಪ ಸಮೀಪದ ಮೇಗೂರು...
ಕ್ರೈಮ್ಚಿಕ್ಕಮಂಗಳೂರುಬೆಂಗಳೂರುರಾಜ್ಯಸುದ್ದಿ

ಕಾಡಿನ ರಹಸ್ಯ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿದ್ದಾರೆ ನಕ್ಸಲರು..! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಶರಣಾದ ನಕ್ಸಲರು ಇನ್ನೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು  ಕಾಡಿನ ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಾವೊಬ್ಬ ನಕ್ಸಲರು ಕೂಡ ಆಯುಧಗಳನ್ನು ಪೊಲೀಸರಿಗೆ ನೀಡಿಲ್ಲ. ಮುಂದಿನ ವಾರ ಪೊಲೀಸರು ನಕ್ಸಲರ ವಶಕ್ಕೆ ಪಡೆಯಲಿದ್ದು ಬಳಿಕ ಅಡಗಿಸಿಟ್ಟ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಪೊಲೀಸರು 6 ಮಂದಿ ನಕ್ಸಲರನ್ನು ರಾಷ್ಟ್ರೀಯ ತನಿಖಾ ದಳದ (NIA) ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ....
1 2 3
Page 1 of 3
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ