ಹಾಸನ ವಿಮಾನ ನಿಲ್ದಾಣ ಕುರಿತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್ ಡಿ ಕುಮಾರಸ್ವಾಮಿ – ಕಹಳೆ ನ್ಯೂಸ್
ನವದೆಹಲಿ : ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು, ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ ಸೀಪ್ಲೇನ್...