ಮಿತ್ತೂರು ಸರಕಾರಿ ಉ ಹಿ ಪ್ರಾ ಶಾಲಾ ನೂತನ ಕೊಠಡಿ,ಸಭಾಂಗಣ ಉದ್ಘಾಟನೆ ; ಕಲಿಕೆಯ ಬಗ್ಗೆ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸಬೇಡಿ: ಶಾಸಕ ಅಶೋಕ್ ರೈ–ಕಹಳೆ ನ್ಯೂಸ್
ಪುತ್ತೂರು: ಮಕ್ಕಳ ಮನಸ್ಸು ಮೃದುವಾಗಿದೆ ಅದು ಏನು ಕೊಟ್ಟರೂ ಸ್ವೀಕಾರ ಮಾಡುತ್ತದೆ, ಅದೇ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸಿದರೆ ಮುಂದೆ ಮಕ್ಕಳು ಆ ವಿಚಾರದಲ್ಲಿ ಭಯವನ್ನೇ ಹೊಂದಿರುತ್ತಾರೆ ಈ ಕಾರಣಕ್ಕೆ ಮಕ್ಕಳ ಮನಸ್ಸಲ್ಲಿ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬೇಡಿ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಮಿತ್ತೂರು ಸರಕಾರಿ ಉ ಹಿ ಪ್ರಾ ಶಾಲಾ ನೂತನ ಕೊಠಡಿ ಹಾಗೂ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದರು. ಕಲಿಕೆಯಲ್ಲಿ ಹಿಂದೆ ಇರುವ...