ಕಲ್ಲಬೆಟ್ಟು: ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆ- -ಕಹಳೆ ನ್ಯೂಸ್
ಕಲ್ಲಬೆಟ್ಟು : ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಬೆಂಗಳೂರಿನ ಗಾಂಧೀ ಭವನದಲ್ಲಿ ಸೆ. 17 ರಿಂದ 23 ರ ವರೆಗೆ ನಡೆಯುವ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಮೂಡುಬಿದಿರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿ ಅಪೇಕ್ಷಾ ಶೆಟ್ಟಿ ಆಯ್ಕೆಯಾಗಿದ್ದಾರೆ. ಈಕೆ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ನೃತ್ಯ, ಭಾಷಣ, ಪ್ರಬಂಧ, ಚಿತ್ರಕಲೆ, ಪೋಸ್ಟರ್ಮೇ...