ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದ ಪೋಷಕರ ಸಭೆ-ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಪರೀಕ್ಷಾ ಸಮಯ ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ನಡೆಸಲಾದ ಈ ಸಭೆಯಲ್ಲಿ ಮುಖ್ಯವಾಗಿ ಮುಂಬರುವ ಪೂರ್ವಸಿದ್ಧತಾ ಪರೀಕ್ಷೆಗಳು, ಹಾಗೂ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿ ಹಾಗೂ ನಿಯಮಾವಳಿಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು. ಸಂಖ್ಯಾಶಾಸ್ತ್ರ ವಿಭಾಗದ...