ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್ ಪಡೆದ ಕಾರ್ಕಳ ಕ್ರಿಯೇಟಿವ್ ನ ವಿದ್ಯಾರ್ಥಿಗಳು –ಕಹಳೆ ನ್ಯೂಸ್
ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ‍್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ ವಿಭಾಗದಲ್ಲಿ...