ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ದಾಖಲೆಯ ಮೂರನೇ ವರ್ಷವೂ ಶೇ. 100 ಫಲಿತಾಂಶ : : ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ 3ನೇ ರ‍್ಯಾಂಕ್– ಕಹಳೆ ನ್ಯೂಸ್
ಕಾರ್ಕಳ : 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್. ಹೆಚ್ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್ , ಹಂಸಿನಿ ವಿ...