Monday, January 20, 2025

ಶಿಕ್ಷಣ

ಬೆಂಗಳೂರುಶಿಕ್ಷಣಸುದ್ದಿ

ಪ್ರಥಮ ಪಿಯು ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು, ಮಾ 27: ಪ್ರಥಮ ಪಿಯು ಪೂರಕ ಪರೀಕ್ಷೆ ಮೇ 20 ರಿಂದ 31ರವರೆಗೆ ನಡೆಯಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಶೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿಯ ಪ್ರಕಟನೆಯನ್ನು ಮಾಡಿದ್ದು, ಜೂನ್ ‍6 ರಂದು ಪರೀಕ್ಷೆಯ ಫಲಿತಾಂಶ ಪ್ರಕಟವಾಗಬೇಕೆಂದು ಸೂಚನೆಯನ್ನು ನೀಡಿದೆ. ಪಿಯುಸಿ ಪೂರಕ ಪರೀಕ್ಷೆಯನ್ನು ನಡೆಸಿಕೊಡುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪನಿರ್ದೇಶಕರಿಗೆ ನೀಡಲಾಗಿದೆ. ಮಾರ್ಚ್ 30ಕ್ಕೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗುತ್ತಿದ್ದು ಈ ಸಮಯದಲ್ಲಿ...
ರಾಜ್ಯಶಿಕ್ಷಣಸುದ್ದಿ

ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ : ರಾಜ್ಯದ 2,750 ಕೇಂದ್ರಗಳಲ್ಲಿ ನಡೆಯಲಿರುವ SSLC ಎಕ್ಸಾಂ – ಕಹಳೆ ನ್ಯೂಸ್

ಬೆಂಗಳೂರು: ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ರೆಗ್ಯುಲರ್ ವಿದ್ಯಾರ್ಥಿಗಳಾಗಿದ್ದಾರೆ. 18,225 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ರೆ, 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ : ಪ್ರತೀಯೊಂದು ಕ್ಷೇತ್ರದಲ್ಲೂ ಶಾಸಕರ ಸೇವೆ ಅಭಿನಂದನಾರ್ಯ: ಕಾವು ಹೇಮನಾಥ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀರಾಮ ಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇದರ ವತಿಯಿಂದ ಪುತ್ತೂರಿನ ಬಂಟರ ಭವನದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರವು ಮಾ.23 ರಂದು ನಡೆಯಿತು. ಕಾರ್ಯಾಗಾರವನ್ನು ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶಾಸಕರಾದ ಅಶೋಕ್ ರೈ ನೇತೃತ್ವದಬಟ್ರಸ್ಟ್ ಮೂಲಕ ಈ ಕಾರ್ಯಾಗಾರ ನಡೆಯುತ್ತಿದೆ....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ರೋಟರಿ ಕ್ಲಬ್ ಬಂಟ್ವಾಳದಿಂದ ಬಿ.ಮೂಡ ಪ್ರಾಥಮಿಕ ಶಾಲೆ ಗೌರವ ಶಿಕ್ಷಕರ ವೇತನ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕರ ವೇತನ ಮೊತ್ತ ಹಸ್ತಾಂತರಿಸಲಾಯಿತು. ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಪ್ರಕಾಶ್ ಬಾಳಿಗಾ ಅವರು ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ಅವರಿಗೆ ನೆರವು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕೋಶಾಧಿಕಾರಿ ಸಂದೀಪ್ ಮಿನೇಜಸ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ ಮಾಂಬಾಡಿ, ಸಹಶಿಕ್ಷಕರಾದ ತಾಹಿರಾ, ಸುಶೀಲಾ, ಹೇಮಾವತಿ, ಅತಿಥಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಸ್ಥಗಿತಗೊಂಡಿದ್ದ 5, 8, 9, ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಮುಂದುವರೆಸಲು ಹೈಕೋರ್ಟ್‌ನಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು.ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ಇಂದು ಪ್ರಕಟಿಸಿದ್ದು, ಸ್ಥಗಿತಗೊಂಡಿರುವಂತ ಪರೀಕ್ಷೆಗಳನ್ನು ಮುಂದುವರೆಸಲು ಹೈಕೋರ್ಟ್ ಸೂಚಿಸಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರೈ ಎಜುಕೇಶನಲ್ ಟ್ರಸ್ಟ್ ನಿಂದ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಬಗ್ಗೆ ಮಾಹಿತಿ ಕಾರ್ಯಾಗಾರ –ಕಹಳೆ ನ್ಯೂಸ್

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇದರ ಜಂಟಿ ಆಶ್ರಯದಲ್ಲಿ ನಾಳೆ (ಮಾ. 23 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ ನಡೆಯಲಿದೆ ಎಂದು ಟ್ರಸ್ಟ್ನ ಕಾಯಾಧ್ಯಕ್ಷರಾದ ಸುದೇಶ್ ಶೆಟ್ಟಿ ತಿಳಿಸಿದ್ದಾರೆ. ಮಾ. 23 ರಂದು ಬೆಳಿಗ್ಗೆ 11 ಗಂಟೆಗೆ ಸುಂದರ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪಿಯುಸಿ ನಂತರ ವಿದ್ಯಾರ್ಥಿಗಳು...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಬಿಜೈ ಕಾಪಿಕಾಡ್ ನ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಬಿಜೈ ಕಾಪಿಕಾಡ್ ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಎರಡು ಕೊಠಡಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿ ಶಾಲೆಗೆ ಹತ್ತಾಂತರಿಸಿದರು. ನಂತರ ಮಾತನಾಡಿದ ಶಾಸಕರು, 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆ ಇದಾಗಿದ್ದು, ಸರ್ಕಾರಿ...
ದಕ್ಷಿಣ ಕನ್ನಡರಾಜಕೀಯಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಹಾಗೂ ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಮತದಾನ ಜಾಗೃತಿ ಕುರಿತಾದ “ಮತದಾನ ಯಾಕೆ ಬೇಕು?” ಎಂಬ ಬೀದಿ ನಾಟಕ ಪ್ರದರ್ಶನ – ಕಹಳೆ ನ್ಯೂಸ್

ಸುಳ್ಯ : ಮತದಾನದ ಕುರಿತಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನೆಹರೂ ಮೆಮೋರಿಯಲ್ ಕಾಲೇಜು ಮತ್ತು ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಆಯೋಜಿಸಲಾದ ಮತದಾನ ಜಾಗೃತಿ ಕುರಿತಾದ "ಮತದಾನ ಯಾಕೆ ಬೇಕು?" ಎಂಬ ಬೀದಿನಾಟಕವನ್ನು ಕೆವಿಜಿ ವೃತ್ತ ಕುರುಂಜಿಭಾಗ್ ನಲ್ಲಿ ಪ್ರದರ್ಶಿಸಲಾಯಿತು. ಈ ಬೀದಿನಾಟಕವನ್ನು ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕರಾದ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಮಮತಾ ಕೆ ನಿರ್ದೇಶಿಸಿದ್ದು, ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥೆ ಭವ್ಯ...
1 22 23 24 25 26 48
Page 24 of 48