ಮೂಡುಬಿದಿರೆ: ಮಾಂಟ್ರಾಡಿಯಲ್ಲಿ ಕೂಸಿನ ಮನೆ ಉದ್ಘಾಟನೆ – ಕಹಳೆ ನ್ಯೂಸ್
ಮೂಡುಬಿದಿರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಯ್ಕೆಯಾದ ಮೂಡಬಿದ್ರಿ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮದಲ್ಲಿ ಕೂಸಿನ ಮನೆ ಕೇಂದ್ರದ ಉದ್ಘಾಟನಾ ಸಮಾರಂಭವು ಜ.12ರಂದು ನಡೆಯಿತು. ಕೂಸಿನ ಮನೆ ಕೇಂದ್ರವನ್ನು ಪಂಚಾಯತ್ ಅಧ್ಯಕ್ಷರಾದ ಉದಯ್ ಪೂಜಾರಿ ಅವರು ಉದ್ಘಾಟಿಸಿ,ಕೂಸಿನ ಮನೆ ಈಗಾಗಲೇ ಉದ್ಘಾಟನೆಗೊಂಡಿದ್ದು, ಗ್ರಾಮಸ್ಥರ ಪ್ರೋತ್ಸಾಹದಿಂದ ಹೆಚ್ಚಿನ ಮಕ್ಕಳ ನೋಂದವಣೆಯಾಗಿ ಯೋಜನೆ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ್...