Recent Posts

Monday, January 20, 2025

ಶಿಕ್ಷಣ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ಅನುದಾನಿತ ಪ್ರೌಢಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸೌಲಭ್ಯ ಮಂಜೂರು –ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಅನುದಾನಿತ ಪ್ರೌಢಶಾಲಾ ಶಿಕ್ಷಕಿಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ಮತ್ತು ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಇರುವಂತೆ ಶಿಶುಪಾಲನಾ ರಜೆ ಸೌಲಭ್ಯವನ್ನು ವಿಸ್ತರಿಸಲು ಮನವಿ ಮಾಡಲಾಗಿದೆ. ಪತ್ರದಲ್ಲಿ ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರು ಮತ್ತು ನೌಕರರು ಸರ್ಕಾರದ ಅನುದಾನದಿಂದಲೇ ವೇತನ, ಭತ್ಯೆಗಳನ್ನು ಪಡೆಯುತ್ತಿದ್ದಾರೆ. ಅಲ್ಲದೆ ಸರ್ಕಾರಿ ಮಹಿಳಾ ನೌಕರರ ಮತ್ತು ಅನುದಾನಿತ ಪ್ರೌಢಶಾಲಾ ಮಹಿಳಾ ನೌಕರರ ಕರ್ತವ್ಯದ ಸ್ವರೂಪ...
ಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ- 2023ಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ಪಠ್ಯದ ಜತೆಗೆ ಪ್ರಾಯೋಗಿಕ ವಿಚಾರಗಳಿಗೆ ಸಮಾನ ಅವಕಾಶವನ್ನು ನೀಡಿದಾಗ ಮಾತ್ರ ಕಲಿಕೆ ಪೂರ್ಣವಾಗುತ್ತದೆ ಮತ್ತು ಸವಾಲನ್ನು ಸಮರ್ಥವಾಗಿ ಎದುರಿಸುವುದಕ್ಕೆ ಸಹಕಾರಿಯಾಗುತ್ತದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ರವೀಶ್.ಪಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ...
ಪುತ್ತೂರುರಾಜಕೀಯರಾಜ್ಯಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ “ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ” ಬಗ್ಗೆ ವಿಶೇಷ ಉಪನ್ಯಾಸ – ಕಹಳೆ ನ್ಯೂಸ್

ಪುತ್ತೂರು : ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆಯುತ್ತಿರುವ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಇದರ ಭೌತಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಶ ಭಟ್ ಅವರು ವೃತ್ತಿ, ಉದ್ಯೋಗ ನೀಡುವ ಶಿಕ್ಷಣವನ್ನು ಅರಸಿ ಸೂಕ್ತವಾದುದನ್ನು ಆಯ್ಕೆ ಮಾಡುವ ಪರ್ವ ಕಾಲವಿದು. ಅವಕಾಶಗಳು ಕೈಬೀಸಿ ಕರೆಯುತ್ತಿದೆ. ಆದರೆ ಶಿಕ್ಷಣಾವಕಾಶಗಳ ಮಾಹಿತಿ...
ಮೂಡಬಿದಿರೆಶಿಕ್ಷಣಸುದ್ದಿ

ನಾಟಾ ಪರೀಕ್ಷೆಯಲ್ಲಿ ಎಕ್ಸ್ ಲೆಂಟ್ ವಿದ್ಯಾರ್ಥಿಗಳ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ – ಕಹಳೆ ನ್ಯೂಸ್

ಮೂಡುಬಿದಿರೆ : 2023ರ ಏಪ್ರಿಲ್ ತಿಂಗಳಿನಲ್ಲಿ ನಡೆದ ನಾಟಾ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಇದರಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯೊಂದಿಗೆ ಅರ್ಹತೆಯನ್ನು ಪಡೆದಿರುತ್ತಾರೆ.   ತೇಜಸ್ವಿನಿ ಎಲ್ ರೆಡ್ಡಿ, ಧ್ಯಾನ್ ಎಮ್ ಎ, ಅಮನ್ ಇರಾನಿ. ಇವರ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಮುಂದಿನ ವ್ಯಾಸಂಗಕ್ಕೆ ಅನುಕೂಲವಾಗುವಂತೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಯವರಾದ ಶ್ರೀಮತಿ ರಶ್ಮಿತಾ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ : ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿಗೆ ಶೇ 95% ಫಲಿತಾಂಶ –ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಗೆ ಹಾಜರಾದ 301 ವಿದ್ಯಾರ್ಥಿಗಳಲ್ಲಿ 284 ವಿದ್ಯಾರ್ಥಿಗಳು ತೇರ್ಗಡೆಯಾಗಿ ಒಟ್ಟು ಶೇ 95 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ 31 ರಲ್ಲಿ 30, ವಾಣಿಜ್ಯ ವಿಭಾಗದಲ್ಲಿ 171 ರಲ್ಲಿ 166, ವಿಜ್ಞಾನ ವಿಭಾಗದಲ್ಲಿ 99 ರಲ್ಲಿ 88 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ 83, ಪ್ರಥಮ ಶ್ರೇಣಿಯಲ್ಲಿ 161 ವಿದ್ಯಾರ್ಥಿಗಳು ತೇರ್ಗಡೆಯಾಗಿ ಸಾಧನೆಗೈದಿದ್ದಾರೆ. ಗ್ರಾಮಾಂತರ ಪ್ರದೇಶದ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ವಂಶಸ್ಥೆ ಮಂಜುಶ್ರೀ ಕೆದಂಬಾಡಿ ಪಿಯು ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ – ಕಹಳೆ ನ್ಯೂಸ್

ಸುಳ್ಯ, ಏ 21: 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ವಂಶಸ್ಥರಾದ ಮಂಜುಶ್ರೀ ಕೆದಂಬಾಡಿ ಅವರು ಪಿಯು ಪರೀಕ್ಷೆಯಲ್ಲಿ 591 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬೇರಡ್ಕದ ತೀರ್ಥರಾಮ ಕೆದಂಬಾಡಿ ಮತ್ತು ಸಂಧ್ಯಾ ಕೆದಂಬಾಡಿ ದಂಪತಿಯ ಪುತ್ರಿ. ಕೆದಂಬಾಡಿ ರಾಮಯ್ಯಗೌಡರ ಐದನೇ ತಲೆಮಾರಿನ ಮಂಜುಶ್ರೀ ಆಗಿದ್ದು, ರಾಮಯ್ಯಗೌಡರು ಬ್ರಿಟಿಷರ ವಿರುದ್ಧ ನಾನಾ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ; ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಮೂಡಬಿದಿರೆ ವಿದ್ಯಾರ್ಥಿನಿ ಅನನ್ಯಾ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಮೂಡಬಿದಿರೆ ವಿದ್ಯಾರ್ಥಿನಿ ಅನನ್ಯಾ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ ಪಡೆದುಕೊಂಡಿದ್ದಾರೆ. https://karresults.nic.in  ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ರಾಜ್ಯದಲ್ಲಿ ಪ್ರಥಮ ರ್‍ಯಾಂಕ್‌ ಪಡೆದವರ ವಿವರ:  ಕಲಾ ವಿಭಾಗ : ತಬಸುಮ್ ಶೇಕ್, ಜಯನಗರ ಬೆಂಗಳೂರು...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜ್ಯಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ – ಕಹಳೆ ನ್ಯೂಸ್

ಬೆಂಗಳೂರು, ಏ 21 :2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. https://karresults.nic.in  ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ(ಶೇ.95) ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು...
1 32 33 34 35 36 48
Page 34 of 48