Recent Posts

Friday, November 22, 2024

ಶಿಕ್ಷಣ

ಆರೋಗ್ಯಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಬಂದ್ ಮಾಡಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ – ಕಹಳೆ ನ್ಯೂಸ್

ತುಮಕೂರು: ಈವರೆಗೂ ಶಾಲಾ ಮಕ್ಕಳಲ್ಲಿ ಎಲ್ಲೂ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಸ್ಪಷ್ಟಪಡಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿ, 'ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಪೋಷಕರು ಗಾಬರಿ, ಆತಂಕಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಏನಾದರೂ ಸಲಹೆ, ಸೂಚನೆಗಳನ್ನು ನೀಡಿದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಹೇಳಿದರು....
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಜನಸೇವೆ ಮಾಡುವ ಹುಮ್ಮಸ್ಸು ಹಾಗೂ ಸಂವಿಧಾನದ ರಕ್ಷಣೆಗೆ ಬದ್ಧರಾಗಿರುವ ವಿದ್ಯಾರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆ ಎದುರಿಸಿ ; ಮಂಗಳೂರಿನ ಯುವ ನಾಯಕ ವಿವೇಕ್ ರಾಜ್ ಪೂಜಾರಿ ಕಿವಿಮಾತು – ಕಹಳೆ ನ್ಯೂಸ್

ಮಂಗಳೂರು, ನ.14 : ಜನಸೇವೆ ಮಾಡುವ ಹುಮ್ಮಸ್ಸು ಹಾಗೂ ಸಂವಿಧಾನದ ರಕ್ಷಣೆಗೆ ಬದ್ಧರಾಗಿರುವ ವಿದ್ಯಾರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಯುವ ಉದ್ಯಮಿ ಹಾಗೂ ಪನಾಮ ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷ ವಿವೇಕ್ ರಾಜ್ ಹೇಳಿದ್ದಾರೆ. ಸೈಂಟ್ ಅಲೋಶಿಯಸ್‌ ಕಾಲೇಜಿನಲ್ಲಿ ನಡೆದ ಯುಪಿಎಸ್‌ಸಿ ಪರೀಕ್ಷೆಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, "ಪ್ರಚಾರದ ಆಮಿಷಕ್ಕೆ ಒಳಗಾಗದೆ ರಾಜಕೀಯ ಒತ್ತಡಕ್ಕೆ ಮಣಿಯಬಾರದು ಎಂಬ ದೃಢ ಸಂಕಲ್ಪ ಹೊಂದಿರುವ ನಿಜವಾದ ಕಾಳಜಿಯುಳ್ಳವರು ಈ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ | ” ಪುತ್ತೂರಿನ ಫಿಲೋಮಿನಾ ಕಾಲೇಜಿನ ವಿಕೃತ ಕಾಮಿ ಶಿಕ್ಷಕ ಪಿಂಟೋ ವಿರುದ್ಧ ನಾಳೆ ಬೆಳಗ್ಗೆ 10.30ಕ್ಕೆ ABVP ಪ್ರತಿಭಟನೆ ” – ABVP ಯಿಂದ ಪ್ರಕಟಣೆ – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ದರ್ಬೆಯ ಪ್ರತಿಷ್ಠಿತ ಖಾಸಗಿ ಕ್ರಿಶ್ಚಿಯನ್ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಪ್ರಕರಣದಲ್ಲಿ ನಿನ್ನೆ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಆರೋಪಿಯನ್ನು ನೀಡಲಾಗಿದೆ. ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ...
ಶಿಕ್ಷಣಸುದ್ದಿ

ತಾಂತ್ರಿಕ ಶಿಕ್ಷಣ ಆಧಾರಿತ ಪ್ರೌಢಶಾಲೆ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಹುಬ್ಬಳ್ಳಿ :‘ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣ ಸಿಗುವಂತಾಗಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‍ನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬಿಯಾಂಡ್ ಬೆಂಗಳೂರು ‘ಇನ್ನೋವೇಷನ್ & ಇಂಪ್ಯಾಕ್ಟ್ ಹುಬ್ಬಳ್ಳಿ' ಕಾರ್ಯಕ್ರಮವನ್ನು ವರ್ಚುವಲ್ ಆಗಿ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ‘1960ರಲ್ಲಿಯೇ ಹುಬ್ಬಳ್ಳಿಯಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಪ್ರೌಢಶಾಲೆ ಇತ್ತು. ಮುಂದೆ ಅದು ಬಂದ್ ಆಯಿತು. ತಾಂತ್ರಿಕ ಶಿಕ್ಷಣದಿಂದ ಮಕ್ಕಳಲ್ಲಿ ಗ್ರಹಿಸುವ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ದ್ವಿತೀಯ ಪಿಯು ಫಲಿತಾಂಶ | ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ ; ಪುತ್ತೂರು ತಾಲೂಕಿನಲ್ಲೇ ಅತ್ಯಧಿಕ 303 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ – ಕಹಳೆ ನ್ಯೂಸ್

ಪುತ್ತೂರು : 2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ( ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣ ದಂಪತಿ ಪುತ್ರಿ), ಶಶಾಂಕ್ ಬಿ(ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿ ದಂಪತಿ ಪುತ್ರ),ಮನೋಜ್ ಎಸ್.ಆರ್( ಹೊಳೆನರಸೀಪುರದ ರಾಜಶೇಖರ ಮತ್ತು ಸಂದ್ಯಾರಾಣಿ ದಂಪತಿ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದ್ವಿತೀಯ ಪಿ.ಯು.ಸಿ. 100% ಫಲಿತಾಂಶ ; ಮಂಗಳೂರಿನ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಶ್ಲಾಘನೀಯ ಸಾಧನೆ – ಕಹಳೆ ನ್ಯೂಸ್

  ಮಂಗಳೂರು, ಜು.20: ಶಕ್ತಿನಗರದ ಶಕ್ತಿ ಪಪೂ ಕಾಲೇಜಿನ ದ್ವಿತೀಯ ಪ ಪೂ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 47 ವಿದ್ಯಾರ್ಥಿಗಳ ಪೈಕಿ ವಿಶಿಷ್ಟ ಶ್ರೇಣಿಯಲ್ಲಿ 28 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 18 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಶ್ರೇಣಿಯಲ್ಲಿ ಓರ್ವ ವಿದ್ಯಾರ್ಥಿ ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದ ಮಾನಸ ಎಸ್.ಬಿ. ಪಿಸಿಎಂಬಿಯಲ್ಲಿ 600ರಲ್ಲಿ 600 ಅಂಕ, ಪಿಸಿಎಂಬಿಯ ರಕ್ಷಿತ್ ಎಸ್.ಬಿ 600ರಲ್ಲಿ 593...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಆಗಸ್ಟ್‌ 10ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ..! ; ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್‌ 10 ರ ವೇಳೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ನಡೆದ ಪರೀಕ್ಷೆಗೆ ಶೇ 99.6 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹೇಳಿದರು. ಇದು ಶಿಕ್ಷಣ ಇಲಾಖೆಯ ಪರೀಕ್ಷೆ ಆಗಿರಲಿಲ್ಲ. ಸಾರ್ವಜನಿಕರ ಪರೀಕ್ಷೆ ಆಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬರು ಗೊಂದಲಕ್ಕೆ...
ಶಿಕ್ಷಣ

 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ದ.ಕ. ಸೇರಿ 5 ಜಿಲ್ಲೆಗಳಲ್ಲಿ ಶೇ.100ರಷ್ಟು ಫಲಿತಾಂಶ- ಕಹಳೆ ನ್ಯೂಸ್

ಬೆಂಗಳೂರು, ಜುಲೈ 20: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ+ ಪ್ರಥಮ ಪಿಯುಸಿ+ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ. ಅದರಂತೆ, 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅದರಲ್ಲಿ 3,35,138 ವಿದ್ಯಾರ್ಥಿಗಳು, ಹಾಗೂ 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. ಹಾಗೂ 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆಯಾಗಿದ್ದಾರೆ. ಹತ್ತನೇ ತರಗತಿಯಲ್ಲಿ ವಿಷಯವಾರು ಪಡೆದಿದ್ದ ಅಂಕಗಳ ಶೇ.45ರಷ್ಟು ಅಂಕ ಗಳಿಕೆ, ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕದಲ್ಲಿ...
1 33 34 35 36 37 43
Page 35 of 43