ಉಡುಪಿ: ನವೆಂಬರ್ 25 ಮತ್ತು 26ರಂದು ಉಡುಪಿ ತಾಲೂಕಿನ 13ನೇ ಕನ್ನಡ ಸಾಹಿತ್ಯ ಸಮ್ಮೇಳನ- ಕಹಳೆ ನ್ಯೂಸ್
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು 13ನೇಯ ಕನ್ನಡ ಸಾಹಿತ್ಯ ಸಮ್ಮೇಳನವು ನವಂಬರ್ 25 ಶುಕ್ರವಾರ ಹಾಗೂ 26 ಶನಿವಾರದಂದು ಶ್ರೀ ಕ್ಷೇತ್ರ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಲಿದೆ. 25.11.2022 ಶುಕ್ರವಾರ ಮಧ್ಯಾಹ್ನ ಗಂಟೆ 2:30 ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶಯದಲ್ಲಿ ಚಿಗುರು ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಧರ್ಮದರ್ಶಿಗಳಾದ ಡಾ. ನಿ. ಬಿ ವಿಜಯ ಬಲ್ಲಾಳ್ ಉದ್ಘಾಟಿಸಲಿರುವರು. ಗಂಟೆ 2.45ಕ್ಕೆ...