ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದ ಖಾಸಗಿ ಶಾಲೆಗಳು – ಕಹಳೆ ನ್ಯೂಸ್
ಬೆಂಗಳೂರು: ಶುಲ್ಕ ಪಾವತಿಸಿಲ್ಲ ಎಂಬುದಕ್ಕಾಗಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ ಬೆನ್ನಲ್ಲೇ ಶುಲ್ಕ ಪಾವತಿಸದಿದ್ದರೆ “ಆನ್‌ಲೈನ್ ಕ್ಲಾಸ್ ಸ್ಥಗಿತಗೊಳಿಸುತ್ತೇವೆ’ ಎಂಬುದಾಗಿ ಖಾಸಗಿ ಶಾಲಾಡಳಿತ ಮಂಡಳಿ ಎಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸಿಲ್ಲ ಎಂಬ ಕಾರಣ ಮುಂದಿಟ್ಟು ಮಕ್ಕಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಸೋಮವಾರವಷ್ಟೇ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್)ದ...