ಹಿರಿಯ ಪ್ರಾಥಮಿಕ ಶಾಲೆ, ಮಣ್ಣಗುಡ್ಡೆ ಇಲ್ಲಿನ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿ ಉದ್ಘಾಟನೆ-ಕಹಳೆ ನ್ಯೂಸ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಣ್ಣಗುಡ್ಡೆ ಇಲ್ಲಿನ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇದು 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆಯಾಗಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ...