Recent Posts

Thursday, November 21, 2024

ಶಿಕ್ಷಣ

ಶಿಕ್ಷಣಸುದ್ದಿ

‘ಆಗಸ್ಟ್‌ ಮೊದಲ ವಾರದಲ್ಲಿ SSLC ಫಲಿತಾಂಶ ಪ್ರಕಟ’ ; ಮಾಹಿತಿ ನೀಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು, ಜು.20  : ಕೊರೊನಾ ಆತಂಕದ ನಡುವೆಯೂ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನ ಶೇ. 89ರಷ್ಟು ಪೂರ್ಣವಾಗಿದ್ದು ಆಗಸ್ಟ್‌ ಮೊದಲ ವಾರದಲ್ಲಿ ಫಲಿತಾಂಶ ಲಭಿಸಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನ ಬಹುತೇಕವಾಗಿ ಪೂರ್ಣವಾಗಿದೆ. ಲಾಕ್‌ಡೌನ್‌ ಕಾರಣದಿಂದಾಗಿ ಬೆಂಗಳೂರಿನ ಎರಡು ಜಿಲ್ಲೆಗಳಲ್ಲಿ ಮೌಲ್ಯಮಾಪನ ಆರಂಭ ತಡವಾಗಿದೆ. ಬೇರೆ ಎಲ್ಲಾ ಜಿಲ್ಲೆಗಳ ಮಾಹಿತಿ ಪಡೆಯುತ್ತಿದ್ದು ಆಗಸ್ಟ್‌...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಡತನ, ಅಂಗ ವೈಕಲ್ಯ ಮೀರಿ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಬಂಟ್ವಾಳದ ಭಾಗ್ಯಶ್ರೀ – ಕಹಳೆ ನ್ಯೂಸ್

ಬಂಟ್ವಾಳ‌‌‌, ಜು 16 : ವಿದ್ಯಾರ್ಥಿನಿಯೋರ್ವಳು ಬಡತನ, ಅಂಗವೈಕಲ್ಯವನ್ನು ಮೆಟ್ಟಿನಿಂತು ದ್ವಿತೀಯ ಪಿಯುಸಿಯಲ್ಲಿ 470 ಅಂಕ ಗಳಿಸಿ ಉತ್ತಮ ಸಾಧನೆಗೈದಿದ್ದಾಳೆ.   ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಕೇಶವ ಕುಲಾಲ್‌ ಹಾಗೂ ರಾಜೀವಿ ದಂಪತಿಯ ಪುತ್ರಿ ಭಾಗ್ಯಶ್ರೀ ಬಂಟ್ವಾಳದ ಎಸ್‌‌.ವಿ.ಎಸ್‌‌ ಕಾಲೇಜಿನಲ್ಲಿ ಕಲಿತು ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ 476 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ಭಾಗ್ಯಶ್ರೀ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಲೊರೆಟ್ಟೋ ಚರ್ಚ್‌ ಶಾಲೆಯಲ್ಲಿ...
ರಾಜಕೀಯಶಿಕ್ಷಣಸುದ್ದಿ

ಪದವಿ, ಸ್ನಾತಕೋತ್ತರ , ಡಿಪ್ಲೋಮಾ ಕೋರ್ಸ್ ವಿದ್ಯಾರ್ಥಿಗಳಿಗೆ ಬಂಪರ್ ; ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್ 19 ಹಿನ್ನೆಲೆ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಕೋರ್ಸ್ ಗಳ ಪ್ರಥಮ ಮತ್ತು ದ್ವಿತೀಯ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಿರುವುದರಿಂದ ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಪರೀಕ್ಷೆ ಸಂಬಂಧ ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಿದೆ. ಇದನ್ನು ವಾಪಸ್ ಕೊಡಿಸಿ ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದಾರೆ....
ಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ 96 ಫಲಿತಾಂಶ : ಕಾಲೇಜಿಗೆ ಕೀರ್ತಿ ತಂದುಕೊಟ್ಟ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು :2019-20ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ 96 ಫಲಿತಾಂಶವನ್ನು ಪಡೆದಿದೆ.     ವಿಜ್ಞಾನ ವಿಭಾಗದಲ್ಲಿ 591 ಅಂಕಗಳನ್ನು ಗಳಿಸುವುದರ ಮೂಲಕ ವಿಜಿತ್ ಕೃಷ್ಣ ಇವರು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರು ಭೌತ ಶಾಸ್ತ್ರ ದಲ್ಲಿ 100, ರಸಾಯನಶಾಸ್ತ್ರದಲ್ಲಿ 100, ಗಣಿತಶಾಸ್ತ್ರದಲ್ಲಿ 98, ಜೀವಶಾಸ್ತ್ರದಲ್ಲಿ 100, ಇಂಗ್ಲಿಷ್ 94 ಮತ್ತು ಸಂಸ್ಕೃತದಲ್ಲಿ 99 ಅಂಕಗಳನ್ನು ಪಡೆಯುವುದರ ಮೂಲಕ ಒಟ್ಟು...
ಶಿಕ್ಷಣಸುದ್ದಿ

ಅಂಬಿಕಾ ಮಹಾವಿದ್ಯಾಲಯದ ನೂತನಪ್ರಾಂಶುಪಾಲರಾಗಿ ಡಾ. ವಿದ್ವಾನ್ ವಿನಾಯಕ ಭಟ್ಟ ಗಾಳಿಮನೆ ಆಯ್ಕೆ- ಕಹಳೆ ನ್ಯೂಸ್

ದೇಶದಲ್ಲೇ ಪ್ರಪ್ರಥಮ ಬಾರಿಗೆ ವಿಜ್ಞಾನ ವಿಷಯದಲ್ಲಿ ತತ್ವಶಾಸ್ತ್ರವನ್ನು ಅಳವಡಿಸಿಕೊಂಡ ಹೆಗ್ಗಳಿಕೆ ಗಳಿಸಿರುವ ಅಂಬಿಕಾ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ವಿದ್ವಾನ್|| ವಿನಾಯಕ ಭಟ್ಟ ಗಾಳಿಮನೆಯವರು ಆಯ್ಕೆಗೊಂಡಿರುತ್ತಾರೆ ಎಂದುಕಾಲೇಜಿನ ಪ್ರಕಟನೆ ತಿಳಿಸಿದೆ. ಶ್ರೀಯುತರು ಶ್ರೀಮನ್ಮಹಾರಾಜ ಸಂಸ್ಕೃತ ಕಾಲೇಜು, ಮೈಸೂರು ಇಲ್ಲಿ ತರ್ಕಶಾಸ್ತ್ರದ ಅಧ್ಯಯನವನ್ನು ನಡೆಸಿ 2006ರಲ್ಲಿ ತರ್ಕಶಾಸ್ತ್ರದಲ್ಲಿ ವಿದ್ವತ್ ಪದವಿ ಪಡೆದುಕೊಂಡಿರುತ್ತಾರೆ. ಕೆನರಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಜಿ.ಎನ್.ಭಟ್ ಇವರ ಮಾರ್ಗದರ್ಶನದಲ್ಲಿ ಭಾರತೀಯ ತತ್ವಶಾಸ್ತ್ರದ ಸಾರವಾಗಿರುವ ‘ಭಗವದ್ಗೀತೆ ಮತ್ತು ಮನೋನಿರ್ವಹಣೆ’ ಎಂಬ...
ಶಿಕ್ಷಣಸುದ್ದಿ

ದ್ವಿತೀಯ ಪಿಯು ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ : ಫಲಿತಾಂಶ ಚೆಕ್ ಮಾಡಲು ಈ ಕ್ರಮ ಅನುಸರಿಸಿ–ಕಹಳೆ ನ್ಯೂಸ್

ಬೆಂಗಳೂರು : ಬಹು ನಿರೀಕ್ಷೆಯಿಂದ ಕಾದು ನೋಡುತ್ತಿದ್ದಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಬೆಳಿಗ್ಗೆ 11.30ಕ್ಕೆ ಪ್ರಕಟಗೊಳ್ಳಲಿದೆ ಎನ್ನಲಾಗುತ್ತಿದ್ದಂತ ಫಲಿತಾಂಶ 10 ಗಂಟೆಗೆ ಪ್ರಕಟಗೊಂಡಿದೆ. ಅಲ್ಲದೇ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೂ ಫಲಿತಾಂಶದ ಸಂದೇಶ ರವಾನೆಯಾಗಿದೆ. ಹೀಗಾಗಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಈ ಕೆಳಗಿನ ವಿಧಾನ ಅನುಸರಿಸಿ ಚೆಕ್ ಮಾಡಬಹುದಾಗಿದೆ. ರಾಜ್ಯದ 6.7 ಲಕ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದೆ. https://karresults.nic.in/ ವೆಬ್ ಸೈಟ್ ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...
ಶಿಕ್ಷಣಸುದ್ದಿ

ನಾಳೆ ಬೆಳಿಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು : ಕೊರೋನಾ ಸಂಕಷ್ಟದ ನಡುವೆಯೂ ಬಾಕಿ ಉಳಿದಿದ್ದಂತ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ನಡೆದ ನಂತ್ರ, ದ್ವಿತೀಯ ಪಿಯುಸಿಯ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ನಾಳೆ ಬೆಳಿಗ್ಗೆ 11.30ಕ್ಕೆ ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ತಲುಪಲಿದೆ. ಈ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಶಿಕ್ಷಣಸುದ್ದಿ

ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು ; ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿ ಆರಂಭ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜೊತೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ...
1 40 41 42 43
Page 42 of 43