ಎಸೆಸೆಲ್ಸಿ ಶೇ. 71.80 ಫಲಿತಾಂಶ – ಸುಳ್ಯದ ಅನುಶ್ ಸೇರಿ ಆರು ಮಂದಿಗೆ ಪ್ರಥಮ ರ್‍ಯಾಂಕ್- ದ.ಕ ಜಿಲ್ಲೆಗೆ 12 ನೇ ಸ್ಥಾನ- ಚಿಕ್ಕಬಳ್ಳಾಪುರಕ್ಕೆ ಪ್ರಥಮ ಸ್ಥಾನ-ಕಹಳೆ ನ್ಯೂಸ್
ಕರ್ನಾಟಕ ಎಸ್‌ಎಸ್‌ಎಲ್ ಸಿ ಫಲಿತಾಂಶಗಳು ಪ್ರಕಟವಾಗಿದ್ದು, ಈ ಬಾರಿ ಶೇ.71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ರಾಜ್ಯಾದ್ಯಂತ 8, 48, 203 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 19, 086 ವಿದ್ಯಾರ್ಥಿಗಳ ಕೊರತೆಯುಂಟಾಗಿತ್ತು. ರಾಜ್ಯಾದ್ಯಂತ 34 ಶೈಕ್ಷಣಿಕ ಜಿಲ್ಲೆಗಳ 22 ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗಿತ್ತು ಎಂದು...