ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್-ಕಹಳೆ ನ್ಯೂಸ್
ನವದೆಹಲಿ: ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಕೇಂದ್ರ ಸರ್ಕಾರ ಪರೀಕ್ಷೆ ನಡೆಸುವುದೇ ಬೇಡವೇ ಎಂಬ ಬಗ್ಗೆ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬಹುದು ಎಂಬ ಆಧಾರದ ಮೇಲೆ ವಿಚಾರಣೆಯನ್ನು ಬರುವ ಸೋಮವಾರಕ್ಕೆ ಮುಂದೂಡಿದೆ. ಸಿಬಿಎಸ್ ಇ, ಐಸಿಎಸ್ ಇಯ 12ನೇ ತರಗತಿ ಪರೀಕ್ಷೆಗಳನ್ನು ಈ ವರ್ಷ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ...