ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಮಾಡಿ, ಇಲ್ಲಾ ಮುಂದೂಡಿ ; ಮಾಜಿ ಸಿ.ಎಂ. ಕುಮಾರಸ್ವಾಮಿ ಆಗ್ರಹ – ಕಹಳೆ ನ್ಯೂಸ್
ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂನ್ 25 ರಂದು ಆರಂಭಗೊಳ್ಳಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಇತರ ರಾಜ್ಯಗಳಂತೆಯೇ ರದ್ದು ಮಾಡಿ, ಇಲ್ಲವಾದ್ರೆ ಅಗಸ್ಟ್ ಅಥವಾ ಸಪ್ಟೆಂಬರ್ ವರೆಗೆ ಆದ್ರೂ ಮುಂದೂಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ನಡೆಯಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳನ್ನು ಹೊಂದಿಕೊಂಡು ಕನಿಷ್ಠ 16 ಲಕ್ಷ ಕ್ಕೂ ಪೋಷಕರಿದ್ದಾರೆ. ಪರೀಕ್ಷೆಯನ್ನು...