ಶಾಲೆಗಳ ಪುನಾರಂಭ, ನವೆಂಬರ್ 6 ರಂದು ನಿರ್ಧಾರ -ಕಹಳೆ ನ್ಯೂಸ್
ಬೆಂಗಳೂರು: ಕೊರೋನಾ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆ, ಕಾಲೇಜು ಪ್ರಾರಂಭಿಸುವ ಕುರಿತು ಸಿದ್ಧತೆ ನಡೆಸಲಾಗಿದೆ. ಈಗಾಗಲೇ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಪದವಿಪೂರ್ವ ಕಾಲೇಜು ಮತ್ತು ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನವೆಂಬರ್ 4 ರಿಂದ 6 ರವರೆಗೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪೋಷಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ನವೆಂಬರ್...