ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾದ ಪ್ರತೀಕ್ಷಾ ಶೆಣೈಗೆ ಹಲವು ಪದಕಗಳು-ಕಹಳೆ ನ್ಯೂಸ್
ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಗಳಲ್ಲಿ ಹಲವು ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ, ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ವತಿಯಿಂದ ಮಂಗಳೂರಿನ ಎಮ್ಮೆಕೆರೆ ಈಜುಕೊಳದಲ್ಲಿ ಜನವರಿ 21 ಹಾಗೂ 22ರಂದು ನಡೆದ ಕರ್ನಾಟಕ ಕ್ರೀಡಾಕೂಟ- 2025ರಲ್ಲಿ ಅವರು...