Thursday, November 28, 2024

ಶಿಕ್ಷಣ

ಕೃಷಿದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ,ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್,ಗೈಡ್ ಶಿಕ್ಷಕಿಯರಾದ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನೂತನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘಗಳ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿ ಸಂಘಗಳು ಮಾರ್ಗಸೂಚಿಗಳಾಗಲಿವೆ. ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸಬಲ್ಲ ಶಕ್ತಿ ಇರುವ ವಿದ್ಯಾರ್ಥಿ ಜೀವನದಲ್ಲಿ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು ಸಾಧ್ಯ.ಜಗತ್ತಿನ ಕತ್ತಲೆಯನ್ನು ಹೋಗಲಾಡಿಸುವ ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿದೆ. ಉತ್ತಮ ನಾಯಕತ್ವ ಗುಣಮಟ್ಟವನ್ನು ಬೆಳೆಸಿಕೊಂಡಾಗ ಪ್ರಪಂಚವನ್ನೇ ಬದಲಿಸುವಂತಹ ಪ್ರಜೆಗಳಾಗಬಹುದು.”ಎಂದು ಸುಳ್ಯದ ಸರಕಾರಿ ಪ.ಪೂ. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಪಿ. ಇವರು ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 2024-25 ನೇ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡಿದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು : ಆಸ್ಟ್ರೇಲಿಯಾದಲ್ಲಿ ಆ.20ರಿಂದ ಆರಂಭವಾಗಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಪುತ್ತೂರಿನ ಬಾಲವನದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡುವ ಜೊತೆಗೆ ಆ.20ರಿಂದ ಸೆ.8ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಪ್ರಥಮ ಪಿಯು ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ,...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ ಸರಸ್ವತಿ ವಿದ್ಯಾಲಯ ಸಿದ್ದಾಪುರದಲ್ಲಿ ನಡೆದ ರಾಜ್ಯಮಟ್ಟದ ತರುಣರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಮತ್ತು ಲಿಖಿತ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ ಆಗಿರುವ ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಕಾಲೇಜಿನಲ್ಲಿ ತುಳು ಸಂಘ, ಪ್ರಾಚೀನ ವಸ್ತುಗಳ ಪ್ರದರ್ಶನ ಕೇಂದ್ರ, ರೋವರ್ಸ್ ರೇಂಜರ್ಸ್ ಘಟಕ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ಆಟಿದ ನೆಂಪು ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ಆಟಿ ಎಂದರೆ ಅದು ಬೇಸಾಯದ ತಿಂಗಳು. ಇಂದು ಗ್ರಾಮೀಣ ಭಾಗದಿಂದ ಅಂತರಾಷ್ಟೀಯ ಮಟ್ಟದವರೆಗೂ ಆಟಿ ತಿಂಗಳ ಆಚರಣೆಗಳನ್ನು ಆಚರಿಸುತ್ತ ಬರುತ್ತಿದ್ದಾರೆ. ತುಳುನಾಡಿನಲ್ಲಿ ತುಳುವರು ಆಟಿ ತಿಂಗಳಿನ ಸಂದರ್ಭದಲ್ಲಿ ಯಾವುದೇ ಶುಭಕಾರ್ಯಕ್ರಮಗಳನ್ನು ಆಚರಿಸುವುದಿಲ್ಲ. ಆಟಿ ಕೆಲೆಂಜ ಮನೆಮನೆಗೆ ಬರುತ್ತಾನೆ. ಈ ಮೂಲಕ ಊರಿಗೆ ಬಂದ ಮಾರಿ ಕಳೆಯುತ್ತಾನೆ ಎಂಬುವುದು ಜನರ ನಂಬಿಕೆ ಎಂದು ವಕೀಲ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಹೇಳಿದರು. ಇವರು...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆ : ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಸಾಧನೆ – ಕಹಳೆ ನ್ಯೂಸ್

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಮತ್ತು ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ. ಪ್ರಥಮ ಸ್ಥಾನ ಪಡೆದ ಬಾಲಕಿಯರ ತಂಡ ಆ. 10 ರಂದು ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆಯುವ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅನನ್ಯ ಪಿ.ಆರ್, ಶ್ರೇಯ ಎಮ್ ಹಾಗೂ ದ್ವಿತೀಯ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಿ ಎ ಫೌಂಡೇಶನ್‌ ಪರೀಕ್ಷೆ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ – ಕಹಳೆ ನ್ಯೂಸ್

ಇನ್ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್‌ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಮಹೇಂದ್ರ ಗೋಪಾಲ್‌ ವಿಭಾಸ್‌.ಕೆ ಹಾಗೂ ನಿಧಿರಾಜ್‌ ಎಂ.ಕೆ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಮಹೇಂದ್ರ ಗೋಪಾಲ್‌ ವಿಭಾಸ್‌ ಇವರು ಪುತ್ತೂರಿನ ಪರ್ಲಡ್ಕದ ಪ್ರಸಾದ್‌ ಕೆ.ವಿ.ಎಲ್‌.ಎನ್ ಹಾಗೂ ಅನುಪಮ ಎಸ್‌ ಇವರ ಪುತ್ರ. ನಿಧಿರಾಜ್‌ ಎಂ.ಕೆ ಇವರು ಹಾಸನದ ಗುಲಾಬಿ.ಕೆ ಇವರ ಪುತ್ರರಾಗಿರುತ್ತಾರೆ. ಇವರನ್ನು ಕಾಲೇಜು...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್.ಎನ್ ಗೆ ತೃತೀಯ ಸ್ಥಾನ- ಕಹಳೆ ನ್ಯೂಸ್

ಕಲ್ಲಡ್ಕ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿ ಚರಣ್.ಎನ್ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಎಚ್.ಸಿ.ಎಲ್ ಸಂಸ್ಥೆಯ ವತಿಯಿಂದ ಜು. 23ರಂದು ತಮಿಳುನಾಡಿನ ಶ್ರೀ ಸುಬ್ರಹ್ಮಣ್ಯ ನಡಾರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್ (ಉದ್ದ ಜಿಗಿತ) ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಚರಣ್ ಅವರ ಈ ಸಾಧನೆಗೆ ಶಾಲಾ ಮುಖ್ಯಶಿಕ್ಷಕರು, ಶಿಕ್ಷಕ ವೃಂದ,...
1 5 6 7 8 9 43
Page 7 of 43