ಎನ್ನೆಂಸಿ, ನೇಚರ್ ಕ್ಲಬ್ ವತಿಯಿಂದ “ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ” ಚಿತ್ರಪಟ ರಚನೆ ಸ್ಪರ್ಧೆ-ಕಹಳೆ ನ್ಯೂಸ್
ಸುಳ್ಯ:ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಸೆಪ್ಟೆಂಬರ್ 26 ಗುರುವಾರದಂದು "ಫಿಲ್ಲೋಕ್ರೋಮ್- ಎಲೆಗಳಿಂದ ಕಲಾತ್ಮಕತೆ" ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಪಟ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭಹಾರೈಸಿದರು. ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಪ್ರಯೋಗಾಲಯದಲ್ಲಿ ಹಮ್ಮಿಕೊಂಡ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಸಮಾಜ ಕಾರ್ಯ ವಿಭಾಗ ಮುಖ್ಯಸ್ಥೆ ಕೃಪಾ ಕೆ ಎನ್, ಬಿಸಿಎ ವಿಭಾಗ ಮುಖ್ಯಸ್ಥೆ ಭವ್ಯ...