ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವೈದ್ಯಕೀಯ ಶಿಬಿರಕ್ಕೆ ರಾಷ್ಟ್ರೀಯ ಪ್ರಶಸ್ತಿಯ ಗರಿ…! : ಶಿಬಿರದ ರುವಾರಿ ಡಾ.ಸುರೇಶ್ ಪುತ್ತೂರಾಯರವರಿಗೆ Diabetes Awareness Initiative Award – ಕಹಳೆ ನ್ಯೂಸ್
ಪುತ್ತೂರು: ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ದೇವರ ಸೇವೆಯ ಜೊತೆಗೆ ಪ್ರಸಾದ ರೂಪದಲ್ಲಿ ನೀಡಲಾಗುತ್ತಿರುವ ಪ್ರತಿ ತಿಂಗಳು ನಡೆಸುವ ಉಚಿತ ವೈದ್ಯಕೀಯ ಶಿಬಿರವು ಇಂದು ರಾಷ್ಟ್ರ ಮಟ್ಟದಲ್ಲಿ ತನ್ನ ಕೀರ್ತಿ ಪತಾಕೆಯನ್ನು ಹಾರಿಸಿದೆ. ಮಧುಮೇಹ ತಪಾಸಣೆಯಲ್ಲಿ ನೀಡಿದ ಅದ್ವಿತೀಯ ಸೇವೆ ಹಾಗೂ ಜನರಲ್ಲಿ ಆರೋಗ್ಯ ಜಾಗೃತಿಗಾಗಿ Diabetes Awareness Initiative Award-2024ಕ್ಕೆ ಶಿಬಿರವು ಭಾಜನವಾಗಿದೆ. ಜ.25ರಂದು ಒರಿಸ್ಸಾದ ಭವನೇಶ್ವರದಲ್ಲಿ ನಡೆದ ಡಯಾಬಿಟೀಸ್ ಇಂಡಿಯಾ 14ನೇ ವಿಶ್ವ ಸಮ್ಮೇಳನದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...