ಅನಾರೋಗ್ಯದ ಹಿನ್ನೆಲೆಯಲ್ಲಿ ಸಚಿವ ಎಸ್.ಅಂಗಾರ ಆಸ್ಪತ್ರೆಗೆ ದಾಖಲು ; ಶಸ್ತ್ರಚಿಕಿತ್ಸೆ ಯಶಸ್ವಿ – ಕಹಳೆ ನ್ಯೂಸ್
ಸುಳ್ಯ: ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ....