ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣ : ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ – ಕಹಳೆ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಂಬಂಧ ಸಿಎಂಗೆ ಹೈಕೋರ್ಟ್ ರಿಲೀಫ್ ನೀಡಿದೆ. ಸಿಎಂ ಪರ ವಕೀಲ ಕಪಿಲ್ ಸಿಬಲ್ ಮನವಿ ಮೇರೆಗೆ ಅರ್ಜಿ ವಿಚಾರಣೆಯನ್ನ ಮುಂದೂಡಲಾಗಿದೆ. ಇನ್ನು ಅರ್ಜಿ ವಿಚಾರಣೆಗೂ ಮುನ್ನ ಮಾತನಾಡಿದ ಸ್ನೇಹಮಯಿ ಕೃಷ್ಣ, ಇವತ್ತೇ ತೀರ್ಪು ಪ್ರಕಟ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ಆದ್ರೀಗ...